2nd PUC Exam: ಪರೀಕ್ಷೆಯಲ್ಲಿ ನಕಲು ಮಾಡಿದ್ರೆ ನೇರ FIR! ಚಿತ್ರದುರ್ಗ ಜಿಲ್ಲಾಡಳಿತದಿಂದ ಖಡಕ್ ರೂಲ್ಸ್; ವಿದ್ಯಾರ್ಥಿಗಳು, ಸಿಬ್ಬಂದಿ ಗಮನಿಸಲೇಬೇಕಾದ ಮಾಹಿತಿ

Author Picture
Published On: February 24, 2026
2nd PUC Exam chitradurga-guidelines

—Advertisement—

ಚಿತ್ರದುರ್ಗ (ಮಧ್ಯ ಕರ್ನಾಟಕ ಲೈವ್ ವಿಶೇಷ): ವಿದ್ಯಾರ್ಥಿಗಳ ಭವಿಷ್ಯದ ದಿಕ್ಸೂಚಿ ಎಂದೇ ಪರಿಗಣಿಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ-1 (2nd PUC Exam-1) ಗೆ ದಿನಗಣನೆ ಶುರುವಾಗಿದೆ. ಈ ಬಾರಿ ಪರೀಕ್ಷಾ ಅಕ್ರಮಗಳಿಗೆ ಶಾಶ್ವತ ಬ್ರೇಕ್ ಹಾಕಲು ಶಿಕ್ಷಣ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿದ್ದು, ಹಿಂದೆಂದಿಗಿಂತಲೂ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ.

ಈ ಹಿಂದೆ ಪರೀಕ್ಷೆಯಲ್ಲಿ ಅಕ್ರಮ ಎಸಗಿದರೆ ಕೇವಲ ಇಲಾಖಾ ವಿಚಾರಣೆ ನಡೆಸಿ ಅಮಾನತು ಮಾಡಲಾಗುತ್ತಿತ್ತು. ಆದರೆ, ಈಗ ಹೊಸ ಕಾನೂನು ಜಾರಿಗೆ ಬಂದಿದ್ದು, ತಪ್ಪಿತಸ್ಥರ ಮೇಲೆ ನೇರವಾಗಿ ಎಫ್‍ಐಆರ್ (FIR) ದಾಖಲಿಸಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪರೀಕ್ಷಾ ಸಿದ್ಧತೆಗಳ ಕುರಿತು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅದರ ಪ್ರಮುಖ ಅಂಶಗಳು ಇಲ್ಲಿವೆ:

ಹೈಟೆಕ್ ಕಣ್ಗಾವಲು: ಬೆಂಗಳೂರಿನಿಂದಲೇ ನೇರ ವೀಕ್ಷಣೆ!

ಪರೀಕ್ಷೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ತಂತ್ರಜ್ಞಾನದ ಮೊರೆ ಹೋಗಲಾಗಿದೆ.

  • ಜಿಲ್ಲೆಯ ಎಲ್ಲಾ 26 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಡ್ಡಾಯ.
  • ಸಿಸಿಟಿವಿಗಳು ನಿರಂತರವಾಗಿ ಕಾರ್ಯನಿರ್ವಹಿಸಲು ಕಡ್ಡಾಯವಾಗಿ ಯುಪಿಎಸ್ (UPS) ಅಥವಾ ಇನ್ವರ್ಟರ್ ಬ್ಯಾಕಪ್ ವ್ಯವಸ್ಥೆ.
  • ವೆಬ್‍ಕಾಸ್ಟಿಂಗ್ ವ್ಯವಸ್ಥೆ: ಪರೀಕ್ಷಾ ಕೇಂದ್ರಗಳ ದೃಶ್ಯಗಳನ್ನು ಬೆಂಗಳೂರಿನಿಂದಲೇ ಅಧಿಕಾರಿಗಳು ಲೈವ್ ಆಗಿ ವೀಕ್ಷಣೆ ಮಾಡಲಿದ್ದಾರೆ. ಜೊತೆಗೆ ಜಿಲ್ಲಾ ಪಂಚಾಯತ್‌ನಲ್ಲೂ ವೀಕ್ಷಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಮೊಬೈಲ್, ಸ್ಮಾರ್ಟ್ ವಾಚ್ ಸಂಪೂರ್ಣ ಬ್ಯಾನ್!

ಪರೀಕ್ಷಾ ಕೊಠಡಿಯೊಳಗೆ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

  • ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಪರೀಕ್ಷಾ ಮೇಲ್ವಿಚಾರಕರಿಗೂ (Invigilators) ಮೊಬೈಲ್ ತರುವಂತಿಲ್ಲ.
  • ಕೇವಲ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಮಾತ್ರ ತುರ್ತು ಸಂವಹನಕ್ಕಾಗಿ ಬೇಸಿಕ್ ಕೀಪ್ಯಾಡ್ (Basic Keypad) ಫೋನ್ ಬಳಸಲು ಅವಕಾಶ.
  • ಸ್ಮಾರ್ಟ್ ವಾಚ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಪ್ರವೇಶವಿಲ್ಲ.

ಶಸ್ತ್ರಸಜ್ಜಿತ ಪೊಲೀಸ್ ಭದ್ರತೆ!

ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಬಿಗಿ ಭದ್ರತೆ ಒದಗಿಸಲಾಗಿದೆ. ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆ ಸಾಗಿಸುವಾಗ ಮತ್ತು ಪರೀಕ್ಷೆ ಮುಗಿದ ಬಳಿಕ ಉತ್ತರ ಪತ್ರಿಕೆಗಳನ್ನು ಅಂಚೆ ಕಚೇರಿಗೆ ತಲುಪಿಸುವಾಗ ಕಡ್ಡಾಯವಾಗಿ ಶಸ್ತ್ರಸಜ್ಜಿತ ಪೊಲೀಸ್ ಭದ್ರತೆ ಇರಲಿದೆ. ಪ್ರತಿ ಕೇಂದ್ರದಲ್ಲಿ ತಹಶೀಲ್ದಾರ್ ನೇತೃತ್ವದ ತ್ರಿಸದಸ್ಯ ಸಮಿತಿ ಹಾಜರಿರಲಿದೆ.

2nd PUC Exam: ಒಂದು ನೋಟದಲ್ಲಿ ಪರೀಕ್ಷಾ ಅಂಕಿ-ಅಂಶಗಳು
ಪರೀಕ್ಷಾ ದಿನಾಂಕ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ
ಒಟ್ಟು ಪರೀಕ್ಷಾ ಕೇಂದ್ರಗಳು 26 (ಇದಕ್ಕೆ 141 ಕಾಲೇಜುಗಳು ಟ್ಯಾಗ್ ಆಗಿವೆ)
ಒಟ್ಟು ವಿದ್ಯಾರ್ಥಿಗಳು 14,281

2nd PUC Exam: ವಿದ್ಯಾರ್ಥಿಗಳ ವಿವರ:

ಹೊಸಬರು ಪುನರಾವರ್ತಿತ ಖಾಸಗಿ ಫಲಿತಾಂಶ ಸುಧಾರಣೆ
12,371 1,645 173 5

ತಾಲೂಕುವಾರು ಪರೀಕ್ಷಾ ಕೇಂದ್ರಗಳು:

ತಾಲೂಕು ಪರೀಕ್ಷಾ ಕೇಂದ್ರಗಳ ಸಂಖ್ಯೆ
ಚಿತ್ರದುರ್ಗ 10
ಚಳ್ಳಕೆರೆ 04
ಹಿರಿಯೂರು 04
ಹೊಸದುರ್ಗ 04
ಮೊಳಕಾಲ್ಮುರು 02
ಹೊಳಲ್ಕೆರೆ 02

ಪರೀಕ್ಷಾ ಪಾವಿತ್ರ್ಯತೆಗೆ ಧಕ್ಕೆ ತರುವ ಯಾವುದೇ ಸಣ್ಣ ಲೋಪವನ್ನೂ ಸಹಿಸುವುದಿಲ್ಲ. ಅತಿ ಸೂಕ್ಷ್ಮ ಕೇಂದ್ರಗಳ ಮೇಲೆ ವಿಶೇಷ ನಿಗಾ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯ ಒದಗಿಸಲು ಸೂಚಿಸಲಾಗಿದೆ.

– ಬಿ.ಟಿ.ಕುಮಾರಸ್ವಾಮಿ,
ಅಪರ ಜಿಲ್ಲಾಧಿಕಾರಿಗಳು, ಚಿತ್ರದುರ್ಗ.

ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ತಿಮ್ಮಯ್ಯ, ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್, ಡಿವೈಎಸ್‌ಪಿ ಅನಿಲ್ ನಾಗೇಗೌಡ, ಡಿಡಿಪಿಐ ಎಂ.ಆರ್.ಮಂಜುನಾಥ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

madhayakarnatakalive@gmail.com

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp