ದಾವಣಗೆರೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ: ಪ್ರಾಣಿಬಲಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶ!

Author Picture
Published On: January 14, 2026
davangere dc gangadhara swamy

—Advertisement—

ದಾವಣಗೆರೆ, ಜ 14: ಫೆಬ್ರವರಿ 22 ರಿಂದ ಆರಂಭವಾಗುವ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಅವರು ಮಾತನಾಡುತ್ತಾ ಈ ಕೆಳಗಿನ ಪ್ರಮುಖ ಸೂಚನೆಗಳನ್ನು ನೀಡಿದರು:

  • ಮೂಲಸೌಕರ್ಯ: ದೇವಸ್ಥಾನದ ಸುತ್ತಮುತ್ತ ಸ್ವಚ್ಛತೆ, ನಿರಂತರ ವಿದ್ಯುತ್ ಪೂರೈಕೆ ಮತ್ತು ಗುಂಡಿ ಮುಕ್ತ ರಸ್ತೆಗಳಿಗೆ ಆದ್ಯತೆ.

  • ಜನದಟ್ಟಣೆ ನಿರ್ವಹಣೆ: ದಿನಕ್ಕೆ ಅಂದಾಜು 2 ಲಕ್ಷ ಭಕ್ತರು ಬರುವ ಸಾಧ್ಯತೆ ಇರುವುದರಿಂದ ಕುಡಿಯುವ ನೀರು, ಶೌಚಾಲಯ, ಆರೋಗ್ಯ ಕೇಂದ್ರ ಹಾಗೂ ಅಂಬುಲೆನ್ಸ್ ವ್ಯವಸ್ಥೆ ಕಡ್ಡಾಯ.

  • ಭದ್ರತೆ: ಪ್ರಮುಖ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಹಾಗೂ ಪೊಲೀಸ್ ಬಂದೋಬಸ್ತ್.

ಏನೇನು ನಿಷೇಧಿಸಲಾಗಿದೆ? ಜಿಲ್ಲಾಧಿಕಾರಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದಾರೆ:

  1. ಪ್ರಾಣಿ ಬಲಿ ನಿಷೇಧ: ದೇವಸ್ಥಾನ ಮತ್ತು ಸುತ್ತಮುತ್ತ ಪ್ರಾಣಿ ಬಲಿ ಸಂಪೂರ್ಣ ನಿಷೇಧ.
  2. ಮದ್ಯ ಮಾರಾಟ: ದೇವಸ್ಥಾನದ ಆವರಣದ ಸುತ್ತಮುತ್ತ ಮದ್ಯ ಮಾರಾಟ ಮಾಡುವಂತಿಲ್ಲ.
  3. ಹಿಲಿಯಂ ಬಲೂನ್: ಭದ್ರತಾ ದೃಷ್ಟಿಯಿಂದ ಹಿಲಿಯಂ ಗ್ಯಾಸ್ ಬಲೂನ್‌ಗಳ ಬಳಕೆಗೆ ನಿಷೇಧ.
  4. ಬೆತ್ತಲೆ ಸೇವೆ: ಬೆತ್ತಲೆ ಮತ್ತು ಅರೆಬೆತ್ತಲೆ ಸೇವೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
  5. ಬ್ಯಾನರ್‌ಗಳು: ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಕೆಗೆ ಪೂರ್ವಾನುಮತಿ ಕಡ್ಡಾಯ.

ನಿಯಮ ಉಲ್ಲಂಘಿಸುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

madhayakarnatakalive@gmail.com

"ಮಧ್ಯ ಕರ್ನಾಟಕ ಲೈವ್ (Madhyakarnataka.live) ಕರ್ನಾಟಕದ ಹೃದಯಭಾಗದ ನೈಜ, ನಿಖರ ಮತ್ತು ಕ್ಷಣ ಕ್ಷಣದ ಸುದ್ದಿಗಳಿಗಾಗಿ ಮೀಸಲಾದ ಡಿಜಿಟಲ್ ಸುದ್ದಿ ವೇದಿಕೆಯಾಗಿದೆ. ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳ ಸ್ಥಳೀಯ ಸಮಸ್ಯೆಗಳು, ರಾಜಕೀಯ, ಕೃಷಿ, ಶಿಕ್ಷಣ ಮತ್ತು ಸಾಂಸ್ಕೃತಿಕ ವಿದ್ಯಮಾನಗಳನ್ನು ಜಗತ್ತಿಗೆ ತಲುಪಿಸುವುದು ನಮ್ಮ ಗುರಿ. ನಾವು ಕೇವಲ ಸುದ್ದಿಯನ್ನಷ್ಟೇ ಅಲ್ಲ, ಜನರ ಧ್ವನಿಯಾಗಲು ಬಯಸುತ್ತೇವೆ."… Read More

Related News

Leave a Comment

Home
Web Stories
Instagram
WhatsApp