ಮುಂದಿನ ಸಿಎಂ ಸಾಹುಕಾರ್ ಎಂದು ಘೋಷಣೆ: ಸತೀಶ್ ಜಾರಕಿಹೊಳಿ ಏನ್‌ ಹೇಳಿದ್ರು ನೋಡಿ

Author Picture
Published On: January 18, 2026
ದಾವಣಗೆರೆಯ ಗೋಪೇನಹಳ್ಳಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ

—Advertisement—

ದಾವಣಗೆರೆ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಗಾಳಿ ಜೋರಾಗಿ ಬೀಸುತ್ತಿರುವ ಬೆನ್ನಲ್ಲೇ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ದಾವಣಗೆರೆಯಲ್ಲಿ ನೀಡಿರುವ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ.

ಒಂದೆಡೆ ಅಭಿಮಾನಿಗಳು “ಸಾಹುಕಾರ್ ನಮ್ಮ ಸಿಎಂ” ಎಂದು ಜೈಕಾರ ಹಾಕುತ್ತಿದ್ದರೆ, ಮತ್ತೊಂದೆಡೆ ಜಾರಕಿಹೊಳಿ ಅವರು ಹೈಕಮಾಂಡ್ ಅಂತಿಮ ನಿರ್ಧಾರದ ಕುರಿತು ಮಾರ್ಮಿಕವಾಗಿ ಮಾತನಾಡಿದ್ದಾರೆ.

ಚನ್ನಗಿರಿ ತಾಲೂಕಿನ ಗೋಪೇನಹಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, “ರಾಜ್ಯದಲ್ಲಿ ಸಿಎಂ ಗಾದಿ ಕುರಿತು ಸೃಷ್ಟಿಯಾಗಿರುವ ಗೊಂದಲಗಳಿಗೆ ಕಾಂಗ್ರೆಸ್ ಹೈಕಮಾಂಡ್ ಶೀಘ್ರವೇ ಬ್ರೇಕ್ ಹಾಕಬೇಕು. ಈ ಗೊಂದಲ ಇತ್ಯರ್ಥವಾಗಬೇಕು ಎಂಬುದು ಕಾಂಗ್ರೆಸ್‌ ಪಕ್ಷದ ಎಲ್ಲಾ ಶಾಸಕರ ಆಶಯವಾಗಿದೆ” ಎಂದು ನೇರವಾಗಿಯೇ ಹೇಳಿದರು.

ಸಿಎಂ ಹುದ್ದೆಯ ಆಸೆ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

 ಇದೇ ವೇಳೆ ಸತೀಶ್ ಜಾರಕಿಹೊಳಿ ಅಭಿಮಾನಿಗಳು ‘ಸಾಹುಕಾರ್ ನಮ್ಮ ಸಿಎಂ’ ಎಂಬ ಪೋಸ್ಟರ್‌ಗಳನ್ನು ಪ್ರದರ್ಶಿಸಿ ಘೋಷಣೆ ಕೂಗಿದಾಗ ಪ್ರತಿಕ್ರಿಯಿಸಿದ ಸಚಿವರು, “ಸದ್ಯಕ್ಕೆ ಮುಖ್ಯಮಂತ್ರಿ ಆಗುವ ಆಸೆ ಇರುವವರು ಆಗಲಿ, ಅದಕ್ಕೆ ನನ್ನ ಬೆಂಬಲವೂ ಇದೆ. ಆದರೆ, ನಾನು 2028ರ ಸಾರ್ವತ್ರಿಕ ಚುನಾವಣೆಯ ನಂತರ ಸಿಎಂ ಹುದ್ದೆಗೆ ಅಧಿಕೃತವಾಗಿ ಬೇಡಿಕೆ ಇಡಲಿದ್ದೇನೆ” ಎಂದು ಭವಿಷ್ಯದ ರಾಜಕೀಯ ನಡೆಯನ್ನು ತಿಳಿಸಿದರು.

ಡಿಕೆಶಿ ದೆಹಲಿ ಭೇಟಿಗೆ ವಿಶೇಷ ಅರ್ಥವಿಲ್ಲ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಡಿ.ಕೆ. ಶಿವಕುಮಾರ್ ಅವರು ಅಸ್ಸಾಂ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಕೂಡ  ಆಗಿದ್ದಾರೆ. ಹಾಗಾಗಿ ಅವರು ದೆಹಲಿಗೆ ಹೋಗಿರುವುದಕ್ಕೆ ವಿಶೇಷ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಾನು ಕೂಡ ಹೊಸ ಕರ್ನಾಟಕ ಭವನದ ಕಟ್ಟಡ ನಿರ್ಮಾಣದ ವಿಚಾರವಾಗಿ ದೆಹಲಿಗೆ ತೆರಳುತ್ತಿದ್ದೇನೆ” ಎಂದು ಹೇಳಿದರು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

madhayakarnatakalive@gmail.com

"ಮಧ್ಯ ಕರ್ನಾಟಕ ಲೈವ್ (Madhyakarnataka.live) ಕರ್ನಾಟಕದ ಹೃದಯಭಾಗದ ನೈಜ, ನಿಖರ ಮತ್ತು ಕ್ಷಣ ಕ್ಷಣದ ಸುದ್ದಿಗಳಿಗಾಗಿ ಮೀಸಲಾದ ಡಿಜಿಟಲ್ ಸುದ್ದಿ ವೇದಿಕೆಯಾಗಿದೆ. ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳ ಸ್ಥಳೀಯ ಸಮಸ್ಯೆಗಳು, ರಾಜಕೀಯ, ಕೃಷಿ, ಶಿಕ್ಷಣ ಮತ್ತು ಸಾಂಸ್ಕೃತಿಕ ವಿದ್ಯಮಾನಗಳನ್ನು ಜಗತ್ತಿಗೆ ತಲುಪಿಸುವುದು ನಮ್ಮ ಗುರಿ. ನಾವು ಕೇವಲ ಸುದ್ದಿಯನ್ನಷ್ಟೇ ಅಲ್ಲ, ಜನರ ಧ್ವನಿಯಾಗಲು ಬಯಸುತ್ತೇವೆ."… Read More

Related News

Leave a Comment

Home
Web Stories
Instagram
WhatsApp