ದಾವಣಗೆರೆ: “ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದು ಮಾಡಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿ ಮಾಡದಿದ್ದರೆ ಕರ್ನಾಟಕ ಬಂದ್ ನಡೆಸುವುದು ಅನಿವಾರ್ಯವಾಗಿದೆ,” ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಖಿಲ ಕರ್ನಾಟಕ ಎನ್‌ಪಿಎಸ್ ನೌಕರರ ಸಂಘದ (ಎಕೆಎನ್‌ಪಿಎಸ್) 2ನೇ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.
“ಒಪಿಎಸ್ ಜಾರಿಗೊಳಿಸುವಂತೆ ನಾವು ಹೋರಾಟ ಮಾಡುತ್ತಲೇ ಬಂದಿದ್ದೇವೆ. ಆದರೆ, ಪ್ರಯೋಜನ ಆಗಿಲ್ಲ. ಕಾರಣ, ಕರ್ನಾಟಕವನ್ನು ಬಂದ್ ಮಾಡಿಯಾದರೂ ಒಪಿಎಸ್ ಪಡೆದೇ ತೀರುತ್ತೇವೆ” ಎಂದು ಸ್ಪಷ್ಟಪಡಿಸಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
“ಈ ನಿಮ್ಮ ರಾಜ್ಯಾಧ್ಯಕ್ಷ ಷಡಕ್ಷರಿಯನ್ನು ಅರೆಸ್ಟ್ ಮಾಡ್ತಾರೆ, ಜೈಲಿಗೆ ಕಳಿಸ್ತಾರೆ, ನಮ್ಮನ್ನು ಸಸ್ಪೆಂಡ್ ಮಾಡ್ತಾರೆ ಎಂದು ಯಾರೂ ಹೆದರಿಕೊಳ್ಳಬೇಡಿ. ನಾವು ಇಂತಹ ಬೆದರಿಕೆಗಳನ್ನೆಲ್ಲಾ ಹಿಂದೆ ನೋಡಿದ್ದೇವೆ. ನಾವು ಯಾರೂ ಹೆದರಿಕೊಳ್ಳುವ ಅಗತ್ಯವೇ ಇಲ್ಲ. ದೇವರು ನಮಗೆ ಜೀವ, ಜೀವನ ಕೊಟ್ಟಿದ್ದಾನೆ. ನನ್ನ ಸ್ವಸಾಮರ್ಥ್ಯದ ಆಧಾರದಲ್ಲಿ ಸರ್ಕಾರಿ ಕೆಲಸ ಸಿಕ್ಕಿದೆ. ನನ್ನನ್ನು ಸರ್ಕಾರಿ ನೌಕರಿಯಿಂದ ತೆಗೆಯಲಿಕ್ಕೆ ಯಾರಿಗೂ ಅಧಿಕಾರವಿಲ್ಲ. ನಾವು ಯಾವುದೇ ಬೆದರಿಕೆಗಳಿಗೆ ಹೆದರುವುದಿಲ್ಲ” ಎಂದರು.
ಪ್ರಮುಖ ಅಂಶಗಳು
-
ಒಳ ಒಪ್ಪಂದ ಒಳ್ಳೆಯದಲ್ಲ: ‘ಹೋರಾಟದ ಸಂದರ್ಭದಲ್ಲಿ ಸರ್ಕಾರ ಮತ್ತು ಸಂಘಟನೆಗಳ ನಡುವೆ ಕೆಲವರು ಇಂಟರ್ನಲ್ ಅಡ್ಜಸ್ಟ್‌ಮೆಂಟ್ ಮಾಡಿಕೊಳ್ಳುತ್ತಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ.’
-
5 ಸಾವಿರ ಕೋಟಿ ಉಳಿತಾಯ: ಒಪಿಎಸ್ ಜಾರಿ ಮಾಡಿದರೆ ವಾರ್ಷಿಕ ಕನಿಷ್ಠ 5,000 ಕೋಟಿ ರೂ. ಉಳಿತಾಯವಾಗಲಿದೆ ಎಂದು ನೌಕರರ ಸಂಘದ ಮುಖಂಡರು ತಿಳಿಸಿದ್ದಾರೆ.
-
ಮುಂದಿನ ಸಭೆ ವಿಜಯೋತ್ಸವ: ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ವೀರೇಶ್ ಎಸ್. ಉಡೇನಪುರ ಮಾತನಾಡಿ, ಮುಂದಿನ ಸಭೆಯು ಒಪಿಎಸ್ ಜಾರಿಯ ವಿಜಯೋತ್ಸವವಾಗಲಿ ಎಂದು ಆಶಿಸಿದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
