ಹರಿಹರ: ತಾಲ್ಲೂಕಿನ ಜಿಗಳಿ ಗ್ರಾಮದ ಗುರುಧ್ಯಾನ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಜನವರಿ 24 ರ ಶನಿವಾರ ಸಂಜೆ 5:30 ಕ್ಕೆ 2025-26ನೇ ಸಾಲಿನ ವಾರ್ಷಿಕೋತ್ಸವ ‘ಗುರುಧ್ಯಾನ ಭಾವಂತರಂಗ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಎಂ. ಕೆ. ಸ್ವಾಮಿ ಅವರು ವಹಿಸಲಿದ್ದು, ದಾವಣಗೆರೆಯ ಹೆಸರಾಂತ ಅರಿವಳಿಕೆ ತಜ್ಞರಾದ ಡಾ. ದಿನೇಶ್ ಕುಮಾರ್ ಎನ್. ರುದ್ರಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಶ್ವಿನಿ ಆಯುರ್ವೇದ ಕಾಲೇಜಿನ ಪ್ರಾಧ್ಯಾಪಕಿ ಡಾ. ಕಾವ್ಯ ಟಿ. ಜಿ. ಆಗಮಿಸಲಿದ್ದಾರೆ.
ಗೌರವ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸಮಾಲೋಚಕ ಚಂದ್ರಶೇಖರ್ ಕೆ. ಎಸ್., ಸಂಸ್ಥೆಯ ಕಾರ್ಯದರ್ಶಿ ಸಾನ್ವಿ ಎಂ. ಕೆ. ಸ್ವಾಮಿ ಹಾಗೂ ಗುರುಧ್ಯಾನ ಶಾಲೆ ನಿರ್ದೇಶಕರಾದ ನಾಗರಾಜ್ ಪಿ. ಓ. ಪಾಲ್ಗೊಳ್ಳಲಿದ್ದಾರೆ. ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಪೋಷಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶಾಲಾ ಮುಖ್ಯೋಪಾಧ್ಯಾಯಿನಿ ಭಾರತಿ ತಳವಾರ್ ಕೋರಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

Hi