ಚಿತ್ರದುರ್ಗ, ಜ.24: ಚುನಾವಣಾ ಪ್ರಕ್ರಿಯೆಯಲ್ಲಿನ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ನೀಡಲಾಗುವ 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿ’ಗೆ ಜಿಲ್ಲೆಯ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ.
ಅಪರ ಜಿಲ್ಲಾಧಿಕಾರಿಗೆ ಪ್ರಶಸ್ತಿ ಗರಿ: ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳ ವಿಭಾಗದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಚುನಾವಣಾ ಆಯೋಗವು ಕೈಗೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಆಯೋಗ ವಹಿಸಿದ ವಿವಿಧ ಕಾರ್ಯಕ್ರಮಗಳ ಅನುಷ್ಠಾನಗೊಳಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದಕ್ಕಾಗಿ ಆಯೋಗವು ಈ ಪ್ರಶಸ್ತಿಗಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಿದೆ.
ಬಿಎಲ್ಒ (BLO) ವಿಭಾಗದಲ್ಲಿ ಶಿಕ್ಷಕಿ ಆಯ್ಕೆ: ಬಿಎಲ್ಒ ವಿಭಾಗದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಉಪ್ಪಾರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕಿ ಎನ್. ಅಂಬಿಕಾ ಅವರೂ ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಉತ್ತಮ ನಿರ್ವಹಣೆಗಾಗಿ ಬಿಎಲ್ಒ ಆಗಿ ಕಾರ್ಯ ನಿರ್ವಹಿಸಿರುವ ಅಂಬಿಕಾ ಅವರು ಆಯೋಗದ ಪ್ರಶಸ್ತಿಗೆ ಭಾಜನರಾಗಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ: ಇದೇ ಜನವರಿ 25ರಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ನಲ್ಲಿ ಆಯೋಜಿಸಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
