ನವದೆಹಲಿ: ಕೇಂದ್ರ ಬಜೆಟ್ನಲ್ಲಿ ರೈಲ್ವೆ ಯೋಜನೆಗಳ ಘೋಷಣೆಯ ಬೆನ್ನಲ್ಲೇ ಕರ್ನಾಟಕಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಬೆಂಗಳೂರು ಮತ್ತು ಪುಣೆ ನಡುವೆ ಹೊಸ ‘ಹೈಸ್ಪೀಡ್ ರೈಲು ಕಾರಿಡಾರ್‘ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರುವ ಲಕ್ಷಣಗಳು ಗೋಚರಿಸಿವೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಈ ಮಹತ್ವದ ಯೋಜನೆಗೆ ಒತ್ತಾಯಿಸಿದ್ದು, ಇದಕ್ಕೆ ಅತ್ಯಂತ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.
-
ಹೊಸ ಮಾರ್ಗ: ಬೆಂಗಳೂರು – ಪುಣೆ ಹೈಸ್ಪೀಡ್ ರೈಲು ಕಾರಿಡಾರ್.
-
ಬೆನಿಫಿಟ್ ಯಾರಿಗೆ?: ಈ ಯೋಜನೆ ಜಾರಿಯಾದರೆ ಕೇವಲ ಬೆಂಗಳೂರು ಅಷ್ಟೇ ಅಲ್ಲ, ಉತ್ತರ ಮತ್ತು ಮಧ್ಯ ಕರ್ನಾಟಕದ ಚಿತ್ರಣವೇ ಬದಲಾಗಲಿದೆ.
-
ಯಾವ ಜಿಲ್ಲೆಗಳಿಗೆ ಲಾಭ?: ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ ಮತ್ತು ಬೆಳಗಾವಿ ಜಿಲ್ಲೆಗಳ ಜನರಿಗೆ ಈ ರೈಲು ಸಂಜೀವಿನಿಯಾಗಲಿದೆ.
ವೇಗ ಮತ್ತು ಅಭಿವೃದ್ಧಿ: ಈ ಕಾರಿಡಾರ್ ನಿರ್ಮಾಣವಾದರೆ ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಸಿಲಿಕಾನ್ ಸಿಟಿ ಬೆಂಗಳೂರು ನಡುವಿನ ಸಂಪರ್ಕ ಮತ್ತಷ್ಟು ವೇಗವಾಗಲಿದೆ. ಅಲ್ಲದೆ, ಪುಣೆಯಿಂದ ಕರ್ನಾಟಕದ ಪ್ರಮುಖ 7 ಜಿಲ್ಲೆಗಳಿಗೆ ತ್ವರಿತ ಸಂಪರ್ಕ ಸಾಧ್ಯವಾಗಲಿದ್ದು, ಉದ್ದಿಮೆ ಮತ್ತು ಪ್ರವಾಸೋದ್ಯಮಕ್ಕೆ ದೊಡ್ಡ ಮಟ್ಟದ ಉತ್ತೇಜನ ಸಿಗಲಿದೆ ಎಂದು ಪ್ರಲ್ಹಾದ ಜೋಶಿ ಪ್ರತಿಪಾದಿಸಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
