ಡಿ.ಐ.ಜಿ ರವಿ ಡಿ. ಚನ್ನಣ್ಣನವರ್‌ಗೆ ‘ಮದಕರಿ ನಾಯಕ’ ಪ್ರಶಸ್ತಿ ಗರಿ: ವಾಲ್ಮೀಕಿ ಜಾತ್ರೆಯಲ್ಲಿ ಅದ್ದೂರಿ ಸನ್ಮಾನ

Author Picture
Published On: February 10, 2026
ravi-channannavar-madakari-nayaka-award-valmiki-jatre

—Advertisement—

ದಾವಣಗೆರೆ: ಇತಿಹಾಸವನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ನಡೆದ ಮಹತ್ವದ ಕಾರ್ಯಕ್ರಮದಲ್ಲಿ ನಾಡಿನ ಗಣ್ಯರಿಗೆ ಪ್ರತಿಷ್ಠಿತ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಹೈಕೋರ್ಟ್ ಹಿರಿಯ ವಕೀಲರು ಹಾಗೂ ಪೊಲೀಸ್ ಇಲಾಖೆಯ ಖಡಕ್ ಅಧಿಕಾರಿ ಈ ಬಾರಿಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿ ಪುರಸ್ಕೃತರು

ವಾಲ್ಮೀಕಿ ರತ್ನ ಪ್ರಶಸ್ತಿ: ಹೈಕೋರ್ಟ್‌ನ ಹಿರಿಯ ವಕೀಲರಾದ ಎನ್.ವೈ. ಹೆಚ್.ವಿಜಯಕುಮಾರ್ ಅವರಿಗೆ ಪ್ರದಾನ ಮಾಡಲಾಯಿತು.
ಮದಕರಿ ನಾಯಕ ಪ್ರಶಸ್ತಿ: ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿ.ಐ.ಜಿ ಹಾಗೂ ಯುವಕರ ಕಣ್ಮಣಿ ರವಿ ಡಿ. ಚನ್ನಣ್ಣನವರ್ ಅವರಿಗೆ ನೀಡಿ ಗೌರವಿಸಲಾಯಿತು.
ಇದೇ ಸುಸಂದರ್ಭದಲ್ಲಿ ‘ವಾಲ್ಮೀಕಿ ವಿಜಯ ಸಂಪುಟ’ ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ಇತಿಹಾಸದ ಸತ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು ಎಂದು ಗಣ್ಯರು ಈ ವೇಳೆ ಅಭಿಪ್ರಾಯಪಟ್ಟರು.

ದಿವ್ಯ ಸಾನಿಧ್ಯ

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಡಾ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹಾಗೂ ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ವಹಿಸಿದ್ದರು.

ಗಣ್ಯರ ದಂಡು

ಕಾರ್ಯಕ್ರಮದಲ್ಲಿ ರಾಜ್ಯದ ಪ್ರಮುಖ ರಾಜಕೀಯ ನಾಯಕರು ಭಾಗವಹಿಸಿದ್ದರು: ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಉಪಸಭಾಪತಿ ರುದ್ರಪ್ಪ ಲಮಾಣಿ, ರಾಯಚೂರು ಸಂಸದ ಕುಮಾರ್ ನಾಯಕ್, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ

ಶಾಸಕರುಗಳ ಉಪಸ್ಥಿತಿ: ಎನ್.ವೈ. ಗೋಪಾಲಕೃಷ್ಣ (ಮೊಳಕಾಲ್ಮೂರು), ನಾಗರಾಜ್ (ಸಿರಿಗುಪ್ಪ), ಟಿ. ರಘುಮೂರ್ತಿ (ಚಳ್ಳಕೆರೆ), ವೇಣುಗೋಪಾಲ ನಾಯಕ್ (ಸೂರಪುರ), ಡಿ.ಜಿ. ಶಾಂತನಗೌಡ (ಹೊನ್ನಾಳಿ), ಬಸವಂತಪ್ಪ (ಮಾಯಕೊಂಡ), ದೇವೇಂದ್ರಪ್ಪ (ಜಗಳೂರು), ಡಾ. ಶ್ರೀನಿವಾಸ್ ಎನ್.ಟಿ (ಕೂಡ್ಲಿಗಿ) ಸೇರಿದಂತೆ ಹಲವು ಶಾಸಕರು ಸಾಕ್ಷಿಯಾದರು.
ಜೊತೆಗೆ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಯೋಗೀಶ್ ಬಾಬು, ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಮರಿಯೋಜರಾವ್, ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವ ನಾಯಕ್ ಉಪಸ್ಥಿತರಿದ್ದರು.

ಪ್ರಾಸ್ತಾವಿಕ ನುಡಿ: ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಜಾತ್ರಾ ಸಮಿತಿ ಅಧ್ಯಕ್ಷರಾದ ಬಸವರಾಜ್ ದದ್ದಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಚಾಲಕ ಪಂಪಾಪತಿ ಸ್ವಾಗತಿಸಿದರು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

madhayakarnatakalive@gmail.com

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp