,

ರಾಜನಹಳ್ಳಿ ಪ್ರಾಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತ

Author Picture
Published On: February 19, 2026

—Advertisement—

  •  ಹೈದ್ರಾಬಾದ್ ಅಪೋಲೋ ಆಸ್ಪತ್ರೆಗೆ ದಾಖಲು; ಭಕ್ತ ವಲಯದಲ್ಲಿ ಆತಂಕ
  • ಚಿಕಿತ್ಸೆಗೆ ಸ್ಪಂದಿಸುತ್ತಿರುವ ಶ್ರೀಗಳು; ವೈದ್ಯರಿಂದ ಆತಂಕ ನಿವಾರಣೆ ಸಂದೇಶ

ದಾವಣಗೆರೆ: ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು ಲಘು ಹೃದಯಾಘಾತಕ್ಕೆ ಒಳಗಾಗಿದ್ದು, ಭಕ್ತ ಸಮೂಹದಲ್ಲಿ ತೀವ್ರ ಆತಂಕ ಮೂಡಿಸಿದೆ.

ಸ್ವಾಮೀಜಿ ಅವರನ್ನು ಸದ್ಯಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಶ್ರೀಗಳು ವೈದ್ಯರ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬುದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ರಾಯಚೂರು ಜಿಲ್ಲೆಯಲ್ಲಿ ವಾಲ್ಮೀಕಿ ಸಮುದಾಯ ಹಮ್ಮಿಕೊಂಡಿದ್ದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆಂದು ಪ್ರಸನ್ನಾನಂದಾಪುರಿ ಸ್ವಾಮೀಜಿ ತೆರಳಿದ್ದರು. ಬುಧವಾರ ರಾತ್ರಿ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಮಾಡಿದ್ದರು. ಈ ವೇಳೆ ಶ್ರೀಗಳಿಗೆ ಹಠಾತ್ ಆಗಿ ಎದೆನೋವು ಕಾಣಿಸಿಕೊಂಡಿದ್ದು, ಅಸ್ವಸ್ಥರಾಗಿದ್ದರು ಎನ್ನಲಾಗಿದೆ.

ಶ್ರೀಗಳನ್ನು ಕೂಡಲೇ ರಾಯಚೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಹೈದರಾಬಾದ್‌ನಲ್ಲಿ ತಜ್ಞ ವೈದ್ಯರು ಶುಶ್ರೂಷೆ ನಡೆಸಿದ್ದು, ಶ್ರೀಗಳು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆಂದು ಆಪ್ತ ಭಕ್ತ ವಲಯ ತಿಳಿಸಿದೆ.

ರಾಜನಹಳ್ಳಿ ಪ್ರಾಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತ

ಭಕ್ತ ಸಮೂಹದಲ್ಲಿ ಆತಂಕದ ಛಾಯೆ:

ಇತ್ತ ಪ್ರಸನ್ನಾನಂದಪುರಿ ಸ್ವಾಮೀಜಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂಬ ಮಾಹಿತಿ ಹರಡುತ್ತಲೇ ಗುರುಪೀಠ ಮತ್ತು ಸಮಾಜದ ಭಕ್ತ ಸಮೂಹದಲ್ಲಿ ಆತಂಕದ ಛಾಯೆ ಮನೆ ಮಾಡಿದೆ. ಆದರೆ, ಇತ್ತ ಚಿಕಿತ್ಸೆ ನೀಡುತ್ತಿರುವ ವೈದ್ಯರು ಶ್ರೀಗಳ ಆರೋಗ್ಯ ಸುಧಾರಿಸಲಿದ್ದು, ಯಾರೂ ಆತಂಕಪಡಬೇಕಿಲ್ಲ ಎಂದು ಮಾಹಿತಿ ರವಾನಿಸಿದ್ದಾರೆ. ಭಕ್ತರು ಕೂಡ ಶ್ರೀಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

madhayakarnatakalive@gmail.com

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp