ದಾವಣಗೆರೆ: ಬೆಣ್ಣೆನಗರಿ ದಾವಣಗೆರೆಯ ಆರಾಧ್ಯ ದೇವತೆ, ಭಕ್ತರ ಇಷ್ಟಾರ್ಥಗಳನ್ನ ಈಡೇರಿಸುವ ನಗರ ದೇವತೆ ಶ್ರೀ ದುರ್ಗಾಂಬಿಕಾ (ದುಗ್ಗಮ್ಮ) ದೇವಿಯ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಅದ್ದೂರಿ ಚಾಲನೆ ದೊರೆತಿದೆ. ಕೇವಲ ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಐತಿಹಾಸಿಕ ಮಹಾಜಾತ್ರೆಗಾಗಿ ಇಡೀ ದಾವಣಗೆರೆ ನಗರವೇ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.
ಕಣ್ಮನ ಸೆಳೆಯುವ ಹೂವು, ಹಣ್ಣುಗಳ ಅಲಂಕಾರ
ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದ ಮುಂಭಾಗ ಬೃಹತ್ ಪೆಂಡಾಲ್ ಹಾಗೂ ಭವ್ಯ ಅರಮನೆಯ ಮಹಾಮಂಟಪ ನಿರ್ಮಾಣ ಮಾಡಲಾಗಿದೆ. ಈ ಬಾರಿ ದೇವಿಗೆ ಧರ್ಮಸ್ಥಳ, ಹೊರನಾಡು ಹಾಗೂ ಶಿರಸಿ ದೇವಸ್ಥಾನದ ಮಾದರಿಯಲ್ಲಿ ವಿಶೇಷವಾಗಿ ವಿವಿಧ ಹೂವು ಮತ್ತು ಹಣ್ಣುಗಳಿಂದ ಕಣ್ಮನ ಸೆಳೆಯುವಂತೆ ಅಲಂಕಾರ ಮಾಡಲಾಗಿದೆ. ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತಸಾಗರವೇ ಹರಿದುಬರುತ್ತಿದೆ.
ಧಾರ್ಮಿಕ ಕಾರ್ಯಕ್ರಮಗಳ ವಿವರ ಹಾಗೂ ಚರಗ ಸಂಪ್ರದಾಯ
ದೇವಿಗೆ ವಿಶೇಷ ಪೂಜೆ ಹಾಗೂ ಉಡಿ ತುಂಬುವ ಕಾರ್ಯಕ್ರಮ ಜರುಗಲಿದ್ದು, ಬೆಳ್ಳಿಯ ರಥದಲ್ಲಿ ದುರ್ಗಮ್ಮನ ಮೆರವಣಿಗೆ ನಡೆಯಲಿದೆ. ರಾತ್ರಿ 11 ಗಂಟೆಗೆ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತದೆ. ಫೆಬ್ರವರಿ 25ರಂದು ಬೆಳಗ್ಗೆ ವಿಶಿಷ್ಟ ‘ಚರಗ ಚೆಲ್ಲುವ’ ಸಂಪ್ರದಾಯ ಹಾಗೂ ಪೂಜಾ ಕೈಂಕರ್ಯಗಳು ಮುಗಿದ ಬಳಿಕ ದೇವಸ್ಥಾನದ ಬಾಗಿಲು ತೆರೆಯಲಾಗುತ್ತದೆ. ಭಕ್ತರ ದೀಡ್ ನಮಸ್ಕಾರ ಹಾಗೂ ಉರುಳು ಸೇವೆಗಳು ಭಕ್ತಿಭಾವದಿಂದ ನಡೆಯಲಿವೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ದಾಖಲೆ ಬರೆದ ಕುರಿ ಕಾಳಗ ಹಾಗೂ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿ
ಜಾತ್ರೆಯ ಪ್ರಮುಖ ಆಕರ್ಷಣೆಯಾದ ‘ಕುರಿ ಕಾಳಗ’ದಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಕುರಿಗಳು ಭಾಗವಹಿಸಿದ್ದವು. ವಿವಿಧ ವಿಭಾಗಗಳಲ್ಲಿ ಒಟ್ಟು 850 ರಿಂದ 900ಕ್ಕೂ ಹೆಚ್ಚು ಕುರಿಗಳು ಕಣಕ್ಕಿಳಿದು ಇತಿಹಾಸ ಸೃಷ್ಟಿಸಿವೆ. ಜಾತ್ರೆ ಮುಗಿದ ಬಳಿಕ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದ್ದು, ಇರಾನ್, ಇರಾಕ್, ಮಹಾರಾಷ್ಟ್ರ, ಹರಿಯಾಣ, ದೆಹಲಿ ಸೇರಿದಂತೆ ವಿವಿಧೆಡೆಯಿಂದ ಘಟಾನುಘಟಿ ಪೈಲ್ವಾನರು ಆಗಮಿಸಲಿದ್ದಾರೆ. ಜೊತೆಗೆ 15 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳ ರಸದೌತಣವೇ ಇರಲಿದೆ.
ಭಕ್ತರಿಗೆ ಸುಸಜ್ಜಿತ ದರ್ಶನ ವ್ಯವಸ್ಥೆ ಹಾಗೂ ದೀಪಾಲಂಕಾರ
ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ದರ್ಶನ ವ್ಯವಸ್ಥೆ ಮಾಡಲಾಗಿದೆ. ಆಂಜನೇಯ ದೇವಸ್ಥಾನದ ಮುಂಭಾಗದಿಂದ ದರ್ಶನದ ಕ್ಯೂ ಆರಂಭವಾಗಲಿದ್ದು, ಉಚಿತ ದರ್ಶನ, ಟಿಕೆಟ್ ದರ್ಶನ ಹಾಗೂ ವಿಐಪಿ ಪಾಸ್ ಮೂಲಕ ತೆರಳಲು ಪ್ರತ್ಯೇಕ ಮಾರ್ಗಗಳನ್ನು ಕಲ್ಪಿಸಲಾಗಿದೆ. ಪಿ.ಬಿ. ರಸ್ತೆಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಹೊಸ ಬಸ್ ನಿಲ್ದಾಣದವರೆಗೆ ಮಾಡಿರುವ ವಿಶೇಷ ವಿದ್ಯುತ್ ದೀಪಾಲಂಕಾರ ಇಡೀ ನಗರವನ್ನು ಝಗಮಗಿಸುವಂತೆ ಮಾಡಿದೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
