ಚಿತ್ರದುರ್ಗ (ಮಧ್ಯ ಕರ್ನಾಟಕ ಲೈವ್ ವಿಶೇಷ): ವಿದ್ಯಾರ್ಥಿಗಳ ಭವಿಷ್ಯದ ದಿಕ್ಸೂಚಿ ಎಂದೇ ಪರಿಗಣಿಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ-1 (2nd PUC Exam-1) ಗೆ ದಿನಗಣನೆ ಶುರುವಾಗಿದೆ. ಈ ಬಾರಿ ಪರೀಕ್ಷಾ ಅಕ್ರಮಗಳಿಗೆ ಶಾಶ್ವತ ಬ್ರೇಕ್ ಹಾಕಲು ಶಿಕ್ಷಣ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿದ್ದು, ಹಿಂದೆಂದಿಗಿಂತಲೂ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ.
ಈ ಹಿಂದೆ ಪರೀಕ್ಷೆಯಲ್ಲಿ ಅಕ್ರಮ ಎಸಗಿದರೆ ಕೇವಲ ಇಲಾಖಾ ವಿಚಾರಣೆ ನಡೆಸಿ ಅಮಾನತು ಮಾಡಲಾಗುತ್ತಿತ್ತು. ಆದರೆ, ಈಗ ಹೊಸ ಕಾನೂನು ಜಾರಿಗೆ ಬಂದಿದ್ದು, ತಪ್ಪಿತಸ್ಥರ ಮೇಲೆ ನೇರವಾಗಿ ಎಫ್‍ಐಆರ್ (FIR) ದಾಖಲಿಸಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪರೀಕ್ಷಾ ಸಿದ್ಧತೆಗಳ ಕುರಿತು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅದರ ಪ್ರಮುಖ ಅಂಶಗಳು ಇಲ್ಲಿವೆ:
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಹೈಟೆಕ್ ಕಣ್ಗಾವಲು: ಬೆಂಗಳೂರಿನಿಂದಲೇ ನೇರ ವೀಕ್ಷಣೆ!
ಪರೀಕ್ಷೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ತಂತ್ರಜ್ಞಾನದ ಮೊರೆ ಹೋಗಲಾಗಿದೆ.
- ಜಿಲ್ಲೆಯ ಎಲ್ಲಾ 26 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಡ್ಡಾಯ.
- ಸಿಸಿಟಿವಿಗಳು ನಿರಂತರವಾಗಿ ಕಾರ್ಯನಿರ್ವಹಿಸಲು ಕಡ್ಡಾಯವಾಗಿ ಯುಪಿಎಸ್ (UPS) ಅಥವಾ ಇನ್ವರ್ಟರ್ ಬ್ಯಾಕಪ್ ವ್ಯವಸ್ಥೆ.
- ವೆಬ್‍ಕಾಸ್ಟಿಂಗ್ ವ್ಯವಸ್ಥೆ: ಪರೀಕ್ಷಾ ಕೇಂದ್ರಗಳ ದೃಶ್ಯಗಳನ್ನು ಬೆಂಗಳೂರಿನಿಂದಲೇ ಅಧಿಕಾರಿಗಳು ಲೈವ್ ಆಗಿ ವೀಕ್ಷಣೆ ಮಾಡಲಿದ್ದಾರೆ. ಜೊತೆಗೆ ಜಿಲ್ಲಾ ಪಂಚಾಯತ್‌ನಲ್ಲೂ ವೀಕ್ಷಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ಮೊಬೈಲ್, ಸ್ಮಾರ್ಟ್ ವಾಚ್ ಸಂಪೂರ್ಣ ಬ್ಯಾನ್!
ಪರೀಕ್ಷಾ ಕೊಠಡಿಯೊಳಗೆ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
- ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಪರೀಕ್ಷಾ ಮೇಲ್ವಿಚಾರಕರಿಗೂ (Invigilators) ಮೊಬೈಲ್ ತರುವಂತಿಲ್ಲ.
- ಕೇವಲ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಮಾತ್ರ ತುರ್ತು ಸಂವಹನಕ್ಕಾಗಿ ಬೇಸಿಕ್ ಕೀಪ್ಯಾಡ್ (Basic Keypad) ಫೋನ್ ಬಳಸಲು ಅವಕಾಶ.
- ಸ್ಮಾರ್ಟ್ ವಾಚ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಪ್ರವೇಶವಿಲ್ಲ.
ಶಸ್ತ್ರಸಜ್ಜಿತ ಪೊಲೀಸ್ ಭದ್ರತೆ!
ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಬಿಗಿ ಭದ್ರತೆ ಒದಗಿಸಲಾಗಿದೆ. ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆ ಸಾಗಿಸುವಾಗ ಮತ್ತು ಪರೀಕ್ಷೆ ಮುಗಿದ ಬಳಿಕ ಉತ್ತರ ಪತ್ರಿಕೆಗಳನ್ನು ಅಂಚೆ ಕಚೇರಿಗೆ ತಲುಪಿಸುವಾಗ ಕಡ್ಡಾಯವಾಗಿ ಶಸ್ತ್ರಸಜ್ಜಿತ ಪೊಲೀಸ್ ಭದ್ರತೆ ಇರಲಿದೆ. ಪ್ರತಿ ಕೇಂದ್ರದಲ್ಲಿ ತಹಶೀಲ್ದಾರ್ ನೇತೃತ್ವದ ತ್ರಿಸದಸ್ಯ ಸಮಿತಿ ಹಾಜರಿರಲಿದೆ.
ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ತಿಮ್ಮಯ್ಯ, ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್, ಡಿವೈಎಸ್‌ಪಿ ಅನಿಲ್ ನಾಗೇಗೌಡ, ಡಿಡಿಪಿಐ ಎಂ.ಆರ್.ಮಂಜುನಾಥ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
