ತಂಬಾಕು ಮಾರಾಟ ಅಂಗಡಿಗಳಿಗೆ ದಾಳಿ: 23 ಪ್ರಕರಣ ದಾಖಲು

Author Picture
Published On: February 26, 2026

—Advertisement—

ಚಿತ್ರದುರ್ಗ: ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ಹೊಳಲ್ಕೆರೆ ತಾಲ್ಲೂಕಿನ ನಗರ ಪ್ರದೇಶದಲ್ಲಿ ಕೋಟ್ಪಾ 2003ರ ಕಾಯ್ದೆಯ ಕುರಿತು ಮಂಗಳವಾರ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳಿಗೆ ದಾಳಿ ಮಾಡಿ ದಂಡ ವಿಧಿಸಿದೆ.

ಕೋಟ್ಪಾ-2003ರ ಕಾಯ್ದೆಯ ತಂಬಾಕು ಕಾರ್ಯಾಚರಣೆ

ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ. ರೇಣುಪ್ರಸಾದ್, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ರೇಖಾ ಅವರ ಮಾರ್ಗದರ್ಶನ ಹಾಗೂ ಆದೇಶದನ್ವಯ ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಹೊಳಲ್ಕೆರೆ ತಾಲ್ಲೂಕಿನ ನಗರ ಪ್ರದೇಶಗಳಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ತಂಬಾಕು ತನಿಖಾ ತಂಡದ ವತಿಯಿಂದ ಆರೋಗ್ಯ ಇಲಾಖೆ ಮತ್ತು ಪುರಸಭೆ ವತಿಯಿಂದ ಕಾರ್ಯಾಚರಣೆ ನಡೆಸಿ, ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ಸಾರ್ವಜನಿಕರಲ್ಲಿ ಜಾಗೃತಿ

ಯುವಜನತೆಯು ಅತೀ ಹೆಚ್ಚಾಗಿ ತಂಬಾಕಿನ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗಿ ಯುವಕರೇ ಬಲಿಯಾಗುತ್ತಿದ್ದಾರೆ ಎಂದು ಯುವಕರಿಗೆ ಮತ್ತು ಅಂಗಡಿ ಮಾಲೀಕರಿಗೆ ತಿಳಿಸುತ್ತಾ, ತಂಬಾಕು ಕಾರ್ಯಾಚರಣೆ ಮಾಡಿ ಸಾರ್ವಜನಿಕರಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಕೆ ನೀಡಿ, ಜಾಗೃತಿ ಮೂಡಿಸಲಾಯಿತು.

ಪ್ರಕರಣ ದಾಖಲು

ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್ಗಳನ್ನು ಹಾಕಲು ಸೂಚಿಸಲಾಯಿತು. ಸೆಕ್ಷನ್-4 ಅಡಿಯಲ್ಲಿ 20 ಕೇಸುಗಳನ್ನು ದಾಖಲಿಸಿ ರೂ. 2075 ದಂಡ ಮತ್ತು ಸೆಕ್ಷನ್-6ಎ ಅಡಿಯಲ್ಲಿ 3 ಕೇಸುಗಳನ್ನು ದಾಖಲಿಸಿ ರೂ. 275 ದಂಡ ವಸೂಲಿ ಮಾಡಲಾಯಿತು.
ತಂಬಾಕು ದಾಳಿಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ, ಸಮಾಜ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ, ಹೊಳಲ್ಕೆರೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಕೆ.ರಂಗನಾಥ, ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಕಲ್ಪನಾ ಇದ್ದರು.
————————————————————————————————————————————————–
ಹೆಚ್ಚಿನ ಮಾಹಿತಿಗಾಗಿ ಲಿಂಕ್‌ಗಳು:
ಇನ್ನಷ್ಟು ಆರೋಗ್ಯ ಮತ್ತು ದೈನಂದಿನ ಸುದ್ದಿಗಳಿಗಾಗಿ: ಮಧ್ಯ ಕರ್ನಾಟಕ ಲೈವ್‌ಗೆ ಭೇಟಿ ನೀಡಿ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp