ಕೊಡದಗುಡ್ಡ ವೀರಭದ್ರೇಶ್ವರ ರಥೋತ್ಸವ ಸಡಗರ: 9 ಲಕ್ಷಕ್ಕೆ ಹರಾಜಾದ ಮುಕ್ತಿ ಬಾವುಟ!

ಜಗಳೂರಿನ ಕೊಡದಗುಡ್ಡ ವೀರಭದ್ರೇಶ್ವರ ರಥೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರ ಸಾಗರ ಮತ್ತು ಅಲಂಕೃತ ಮಹಾರಥ.
— ಜಗಳೂರು ತಾಲ್ಲೂಕಿನ ಪ್ರಸಿದ್ಧ ಕೊಡದಗುಡ್ಡದ ಶ್ರೀ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವವು ಬುಧವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ಜರುಗಿತು.

—Advertisement—

ಜಗಳೂರು: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರವಾದ ಕೊಡದಗುಡ್ಡದ ಶ್ರೀ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವವು ಬುಧವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ಜರುಗಿತು. ದಾವಣಗೆರೆ, ಚಿತ್ರದುರ್ಗ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಭಕ್ತ ಸಾಗರವೇ ಹರಿದುಬಂದಿತ್ತು.

ಭಕ್ತಿ ಭಾವದ ಮೆರವಣಿಗೆ

ಬೆಟ್ಟದ ತುದಿಯಲ್ಲಿರುವ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಿಂದ ಉತ್ಸವ ಮೂರ್ತಿಯನ್ನು ಸಕಲ ಪೂಜಾ ವಿಧಿವಿಧಾನಗಳೊಂದಿಗೆ ಮೆರವಣಿಗೆಯ ಮೂಲಕ ತರಲಾಯಿತು. ನಂತರ ರಥದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಿ ಪ್ರತಿಷ್ಠಾಪಿಸಲಾಯಿತು. ರಥದ ಚಕ್ರಗಳಿಗೆ ಬಾಳೆಹಣ್ಣು ಮತ್ತು ಎಣ್ಣೆ ಹಾಕಿ ವಿಶೇಷ ಪೂಜೆ ಸಲ್ಲಿಸಿದ ನಂತರ, ಭಕ್ತರ “ಹರೋಹರ” ಘೋಷಣೆಗಳ ನಡುವೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

9 ಲಕ್ಷಕ್ಕೆ ಮಾರಾಟವಾದ ಮುಕ್ತಿ ಬಾವುಟ

ಈ ಬಾರಿಯ ರಥೋತ್ಸವದ ಪ್ರಮುಖ ಆಕರ್ಷಣೆಯಾದ ‘ಮುಕ್ತಿ ಬಾವುಟ’ ಭಾರಿ ಮೊತ್ತಕ್ಕೆ ಹರಾಜಾಗಿದೆ. ಶಿವಮೊಗ್ಗ ಜಿಲ್ಲೆಯ ಸುರಹೊನ್ನೆಯ ರೇವಣ್ಣ ಅವರು ಈ ಪವಿತ್ರ ಬಾವುಟವನ್ನು 9 ಲಕ್ಷ ರೂಪಾಯಿಗಳಿಗೆ ಹರಾಜಿನಲ್ಲಿ ಪಡೆದುಕೊಂಡರು.

ಗಣ್ಯರ ಉಪಸ್ಥಿತಿ

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಎಚ್.ಪಿ. ರಾಜೇಶ್, ಎಸ್.ವಿ. ರಾಮಚಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಪಿ. ಪಾಲಯ್ಯ, ಕೆಪಿಸಿಸಿ ಎಸ್.ಟಿ. ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೀರ್ತಿಕುಮಾರ್ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಪ್ರಮುಖರಾದ ರುದ್ರೇಶ್ ಮತ್ತು ರವಿಚಂದ್ರ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.


ಗಮನಿಸಿ: ರಥೋತ್ಸವದ ಸಂದರ್ಭದಲ್ಲಿ ಭಾರಿ ಜನದಟ್ಟಣೆ ಏರ್ಪಟ್ಟಿದ್ದರಿಂದ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಸುಮಾರು 22 ಜನರ ಮೊಬೈಲ್ ಫೋನ್‌ಗಳು ಹಾಗೂ ಮಹಿಳೆಯೊಬ್ಬರ ಬಂಗಾರದ ಮಾಂಗಲ್ಯ ಸರ ಕಳುವಾಗಿದೆ ಎಂದು ದೇವಸ್ಥಾನದ ಮಂಡಳಿಯು ಧ್ವನಿವರ್ಧಕದ ಮೂಲಕ ಪ್ರಕಟಣೆ ನೀಡಿ ಭಕ್ತರಿಗೆ ಎಚ್ಚರಿಕೆ ನೀಡಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

madhayakarnatakalive@gmail.com

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp