ದಾವಣಗೆರೆ ಬಿಜೆಪಿ ಭಿನ್ನಮತ ಸ್ಪೋಟ: ವಿಜಯೇಂದ್ರ ಎದುರೇ ಎರಡು ಬಣಗಳ ಪ್ರತ್ಯೇಕ ಸಭೆ; ಕಮಲ ಪಡೆಯಲ್ಲಿ ಹೈಡ್ರಾಮಾ!

ದಾವಣಗೆರೆಯಲ್ಲಿ ಬಿಜೆಪಿ ನಾಯಕರ ಪ್ರತ್ಯೇಕ ಸಭೆ

—Advertisement—

ದಾವಣಗೆರೆ: ದಾವಣಗೆರೆ ಜಿಲ್ಲಾ ಬಿಜೆಪಿಯಲ್ಲಿನ ಭಿನ್ನಮತವು ಮತ್ತೊಮ್ಮೆ ಬಹಿರಂಗವಾಗಿ ಸ್ಪೋಟಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರ ದಾವಣಗೆರೆ ಭೇಟಿಯ ನಡುವೆಯೇ, ಪಕ್ಷದ ಎರಡು ಬಣಗಳು ಪ್ರತ್ಯೇಕವಾಗಿ ಸಭೆ ನಡೆಸುತ್ತಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಬಣಗಳ ನಡುವಿನ ಕಿತ್ತಾಟ:

ಒಂದು ಕಡೆ ಜಿಲ್ಲಾ ಬಿಜೆಪಿ ಘಟಕವು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಮತ್ತು ವಿಸ್ತಾರಕರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಿದ್ದರೆ, ಇನ್ನೊಂದು ಕಡೆ ಜಿ.ಎಂ. ಸಿದ್ದೇಶ್ವರ್ ನೇತೃತ್ವದ ವಿರೋಧಿ ಬಣವು ಜಿಎಂಐಟಿ (GMIT) ಗೆಸ್ಟ್ ಹೌಸ್‌ನಲ್ಲಿ ಪ್ರತ್ಯೇಕ ಸಭೆ ನಡೆಸುತ್ತಿದೆ. ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಅವರು ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ಸಿದ್ದೇಶ್ವರ್ ಬಣವು ತಮ್ಮ ಅಸಮಾಧಾನವನ್ನು ಹೊರಹಾಕಿದೆ.

ರಾಜ್ಯ ಉಸ್ತುವಾರಿಗೇ ದೂರು:

ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರು ನಗರಕ್ಕೆ ಆಗಮಿಸುತ್ತಿದ್ದಂತೆಯೇ ಈ ಭಿನ್ನಮತ ಬುಗಲೆದ್ದಿದೆ. ಅಸಮಾಧಾನಿತ ನಾಯಕರು ಉಸ್ತುವಾರಿಗಳಿಗೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆ. ಹೊನ್ನಾಳಿಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಅವಧಿಗೂ ಮುನ್ನವೇ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದು ಈ ಅಸಮಾಧಾನಕ್ಕೆ ತುಪ್ಪ ಸುರಿದಂತಾಗಿದೆ.

ಈ ಭಿನ್ನಮತವು ಮುಂಬರುವ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಒಂದು ವೇಳೆ ಈ ಬಣ ಬಡಿದಾಟ ಶಮನಗೊಳ್ಳದಿದ್ದರೆ, ಅದು ಕಾಂಗ್ರೆಸ್‌ಗೆ ವರದಾನವಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

madhayakarnatakalive@gmail.com

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp