ದಾವಣಗೆರೆ: ನಗರದ ದಾರಾಮ ವಿಜ್ಞಾನ ಕಾಲೇಜು, ಎ.ವಿ. ಕಮಲಮ್ಮ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಮಾರ್ಚ್ 6 (ಇಂದು) ಮತ್ತು 7 ರಂದು ಎರಡು ದಿನಗಳ ಕಾಲ ಅಂತರಾಷ್ಟ್ರೀಯ ಸಮ್ಮೇಳನ ‘ಐಸಿಆರ್ ಐಎಎಸ್-2026’ (ICRIAS-2026) ಅನ್ನು ಆಯೋಜಿಸಲಾಗಿದೆ.
ಜೆ.ಜೆ.ಎಂ. ಮೆಡಿಕಲ್ ಕಾಲೇಜಿನ ಬಾಪೂಜಿ ಆಡಿಟೋರಿಯಂನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ‘ಅನ್ವಯಿಕ ವಿಜ್ಞಾನ ಕ್ಷೇತ್ರದಲ್ಲಿನ ಇತ್ತೀಚಿನ ಪ್ರವೃತ್ತಿಗಳು ಮತ್ತು ಹೊಸ ಆವಿಷ್ಕಾರಗಳು’ ಎಂಬ ವಿಷಯದ ಕುರಿತು ಸುದೀರ್ಘ ಚರ್ಚೆಗಳು ನಡೆಯಲಿವೆ ಎಂದು ಎ.ವಿ.ಕೆ. ಕಾಲೇಜಿನ ಪ್ರಾಂಶುಪಾಲರಾದ ಕಮಲ ಸೊಪ್ಪಿನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಉದ್ಘಾಟನೆ ಮತ್ತು ಗಣ್ಯರ ಉಪಸ್ಥಿತಿ:
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಮಾರ್ಚ್ 6(ಇಂದು) ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಡಿ. ಕುಂಬಾರ್ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಬಾಪೂಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಆರ್.ಎಲ್. ಉಮಾಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಪ್ರಮುಖ ಭಾಷಣಕಾರರು:
ಕೇರಳದ ಮಹಾತ್ಮಾ ಗಾಂಧಿ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಹಾಗೂ ದೇಶದ ಹೆಸರಾಂತ ವಿಜ್ಞಾನಿ ಡಾ. ಸಬು ಥಾಮಸ್ ಅವರು ಉದ್ಘಾಟನಾ ಸಮಾರಂಭದಲ್ಲಿ ಆಶಯ ನುಡಿಗಳನ್ನಾಡಲಿದ್ದಾರೆ.
ಸಮ್ಮೇಳನದ ವಿಶೇಷತೆಗಳು:
- ಈ ಸಮ್ಮೇಳನದಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಜೀವವಿಜ್ಞಾನಕ್ಕೆ ಸಂಬಂಧಿಸಿದ ವಿವಿಧ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಾಗುವುದು.
- ಈಗಾಗಲೇ ರಾಜ್ಯ ಹಾಗೂ ಹೊರರಾಜ್ಯಗಳಿಂದ ಸುಮಾರು 242 ಸಂಶೋಧಕರು ನೋಂದಣಿ ಮಾಡಿಕೊಂಡಿದ್ದಾರೆ.
- ಭೌತಶಾಸ್ತ್ರದಿಂದ 23, ರಸಾಯನಶಾಸ್ತ್ರದಿಂದ 76, ಗಣಿತಶಾಸ್ತ್ರದಿಂದ 22 ಹಾಗೂ ಜೀವವಿಜ್ಞಾನ ವಿಭಾಗದಿಂದ 91 ಪ್ರಬಂಧಗಳು ಮಂಡನೆಯಾಗಲಿವೆ.
- ಸ್ಥಳೀಯ ಕಾಲೇಜುಗಳ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಜ್ಞಾನದ ಹಬ್ಬದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಾರ್ಚ್ 7 ರಂದು ಮಧ್ಯಾಹ್ನ 3:30ಕ್ಕೆ ಸಮಾರೂಪ ಸಮಾರಂಭ ನಡೆಯಲಿದ್ದು, ಬಾಪೂಜಿ ವಿದ್ಯಾಸಂಸ್ಥೆಯ ಡಾ. ಬಿ. ಬಕ್ಕಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ವಸಂತ್ ನಾಯಕ್, ಬಿ.ಜೆ. ರುದ್ರೇಶ್, ಬಿ.ಸಿ. ಚೇತನ್ ಹಾಗೂ ಸೌಮ್ಯ ಉಪಸ್ಥಿತರಿದ್ದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
