ಮುಸ್ಲಿಮರಿಗೆ ಟಿಕೆಟ್ ಬಗ್ಗೆ ಅಪ್ಪ ಎಲ್ಲಿ ಹೇಳಿದ್ದಾರೆ?: ಜಬ್ಬಾರ್ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಿಡಿ

ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ಗೊಂದಲದ ಬಗ್ಗೆ ಮಾತನಾಡುತ್ತಿರುವುದು.
— ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್.

—Advertisement—

ದಾವಣಗೆರೆ: ಮುಂಬರುವ ಚುನಾವಣೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವ ವಿಚಾರವಾಗಿ ಕಾಂಗ್ರೆಸ್ ಪಕ್ಷದೊಳಗೆ ಉಂಟಾಗಿರುವ ಗೊಂದಲಕ್ಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತೆರೆ ಎಳೆದಿದ್ದಾರೆ.


ತಮ್ಮ ತಂದೆ, ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ವಿಚಾರದಲ್ಲಿ ಹಬ್ಬಿರುವ ವದಂತಿಗಳನ್ನು ತಳ್ಳಿಹಾಕಿದರು.

ಜಬ್ಬಾರ್ ವಿರುದ್ಧ ಅಸಮಾಧಾನ

ಮುಸ್ಲಿಮರಿಗೆ ಟಿಕೆಟ್ ನೀಡುವ ಭರವಸೆಯನ್ನು ಶಾಮನೂರು ಶಿವಶಂಕರಪ್ಪ ನೀಡಿದ್ದಾರೆ ಎಂದು ಹೇಳುತ್ತಿರುವುದು ಕೇವಲ ಜಬ್ಬಾರ್ ಒಬ್ಬರೇ ಎಂದು ಮಲ್ಲಿಕಾರ್ಜುನ್ ಕಿಡಿಕಾರಿದ್ದಾರೆ. ಈ ವಿಚಾರವಾಗಿ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಸುಳ್ಳು ಹೇಳಿಕೆಗಳನ್ನು ನೀಡಿ ಮತದಾರರಲ್ಲಿ ಗೊಂದಲ ಮೂಡಿಸುವುದು ಸರಿಯಲ್ಲ ಎಂದು ಅವರು ಎಚ್ಚರಿಸಿದರು.

ಮನೆಯಲ್ಲೇ ಬಗೆಹರಿಯಲಿದೆ ಗೊಂದಲ

ಕಾಂಗ್ರೆಸ್ ಪಕ್ಷದ ನಾಯಕರೆಲ್ಲರೂ ಒಂದೇ ಕುಟುಂಬದವರಿದ್ದಂತೆ. ಪಕ್ಷದ ಆಂತರಿಕ ವಿಚಾರಗಳನ್ನು ಅಥವಾ ಗೊಂದಲಗಳನ್ನು ನಾವೆಲ್ಲರೂ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ ಹೊರತು ಬೀದಿಯಲ್ಲಿ ಗೊಂದಲ ಮಾಡುವುದಿಲ್ಲ ಎಂದು ಒಗ್ಗಟ್ಟಿನ ಮಂತ್ರ ಜಪಿಸಿದರು. ಕೆಟ್ ಹಂಚಿಕೆಯಂತಹ ಪ್ರಮುಖ ನಿರ್ಧಾರಗಳನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದರು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp