ಸ್ವಂತ ಉದ್ಯೋಗದ ಕನಸು ಕಂಡವರಿಗೆ ಭಾರತೀಯ ಅಂಚೆ ಇಲಾಖೆಯಿಂದ ಬಂಫರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ ಪಡೆಯುವುದು ಹೇಗೆ?

India Post Office Franchise Scheme 2026 details in Kannada - 10th pass job opportunity.
— ಭಾರತೀಯ ಅಂಚೆ ಇಲಾಖೆಯಿಂದ ಹೊಸ ಫ್ರಾಂಚೈಸಿ ಯೋಜನೆ 2.0: ಕಡಿಮೆ ಬಂಡವಾಳದಲ್ಲಿ ಸ್ವಂತ ಉದ್ಯೋಗಕ್ಕೆ ಅವಕಾಶ.

—Advertisement—

ಪೋಸ್ಟ್ ಆಫೀಸ್ ಫ್ರಾಂಚೈಸಿ | ನಿರುದ್ಯೋಗಿ ಯುವಜನತೆಗೆ ಹಾಗೂ ಸಣ್ಣ ಉದ್ಯಮಿಗಳಿಗೆ ಆರ್ಥಿಕ ಭದ್ರತೆ ನೀಡಲು ಭಾರತೀಯ ಅಂಚೆ ಇಲಾಖೆಯು ತನ್ನ ಫ್ರಾಂಚೈಸಿ ಯೋಜನೆಯನ್ನು ಮತ್ತಷ್ಟು ವಿಸ್ತರಿಸಿದೆ. ಅಂಚೆ ಕಚೇರಿಗಳು ಲಭ್ಯವಿಲ್ಲದ ಪ್ರದೇಶಗಳಲ್ಲಿ ಮೂಲಭೂತ ಸೇವೆಗಳನ್ನು ತಲುಪಿಸುವ ಉದ್ದೇಶದಿಂದ ಈ ಸೌಲಭ್ಯವನ್ನು ನೀಡಲಾಗುತ್ತಿದೆ.

ಯಾರು ಅರ್ಜಿ ಸಲ್ಲಿಸಬಹುದು? (ಅರ್ಹತೆಗಳು):

ಭಾರತೀಯ ಅಂಚೆ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ, ಈ ಕೆಳಗಿನ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ:

ಬೇಕಾಗುವ ಹೂಡಿಕೆ ಮತ್ತು ಸೌಲಭ್ಯಗಳು:

ಈ ಕೇಂದ್ರವನ್ನು ಆರಂಭಿಸಲು ಅಭ್ಯರ್ಥಿಗಳು ಸುಮಾರು 200 ರಿಂದ 250 ಚದರ ಅಡಿ ವಿಸ್ತೀರ್ಣದ ಮಳಿಗೆಯನ್ನು ಹೊಂದಿರಬೇಕು. ಇಲಾಖೆಯ ನಿಯಮದಂತೆ ₹5,000 ರಿಂದ ₹10,000 ವರೆಗೆ ಭದ್ರತಾ ಠೇವಣಿ (Security Deposit) ಪಾವತಿಸಬೇಕಾಗುತ್ತದೆ. ಅಗತ್ಯವಿರುವ ಫರ್ನಿಚರ್ ಹಾಗೂ ಕಂಪ್ಯೂಟರ್ ಉಪಕರಣಗಳ ವೆಚ್ಚವನ್ನು ಅರ್ಜಿದಾರರೇ ಭರಿಸಬೇಕಾಗುತ್ತದೆ.

ಆದಾಯದ ಮೂಲ (ಕಮಿಷನ್ ಆಧಾರಿತ):

ಇದು ನೇರ ವೇತನದ ಉದ್ಯೋಗವಲ್ಲ, ಬದಲಾಗಿ ನೀವು ನೀಡುವ ಸೇವೆಗಳ ಆಧಾರದ ಮೇಲೆ ಇಲಾಖೆಯು ಕಮಿಷನ್ ನೀಡುತ್ತದೆ. ರಿಜಿಸ್ಟರ್ಡ್ ಪೋಸ್ಟ್, ಸ್ಪೀಡ್ ಪೋಸ್ಟ್, ಸ್ಟ್ಯಾಂಪ್ ಮಾರಾಟ ಹಾಗೂ ಮನಿ ಆರ್ಡರ್ ಸೌಲಭ್ಯಗಳ ಮೇಲೆ ನಿಗದಿತ ಕಮಿಷನ್ ಲಭ್ಯವಿರುತ್ತದೆ. ಉತ್ತಮ ವಹಿವಾಟು ನಡೆಸುವ ಕೇಂದ್ರಗಳಿಗೆ ಇಲಾಖೆಯು ಹೆಚ್ಚುವರಿ ಪ್ರೋತ್ಸಾಹಧನವನ್ನೂ ನೀಡುವ ಅವಕಾಶವಿದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ:

ಆಸಕ್ತರು ಇಂಡಿಯಾ ಪೋಸ್ಟ್‌ನ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿಮ್ಮ ವ್ಯಾಪ್ತಿಯ ಅಂಚೆ ಇಲಾಖೆಯ ವಿಭಾಗೀಯ ಅಧೀಕ್ಷಕರಿಗೆ (Divisional Superintendent) ಸಲ್ಲಿಸಬೇಕು.

ಗಮನಿಸಿ (Statutory Warning/Disclaimer): ಈ ಮಾಹಿತಿಯು ಕೇವಲ ಜಾಗೃತಿಗಾಗಿ ನೀಡಲಾಗಿದ್ದು, ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್ ಅಥವಾ ಸಮೀಪದ ಪ್ರಧಾನ ಅಂಚೆ ಕಚೇರಿಯಲ್ಲಿ ನಿಯಮ ಮತ್ತು ನಿಬಂಧನೆಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಸೂಚಿಸಲಾಗಿದೆ. ಅಂತಿಮ ಆಯ್ಕೆಯು ಇಲಾಖೆಯ ವಿವೇಚನೆಗೆ ಒಳಪಟ್ಟಿರುತ್ತದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp