ಚಿತ್ರದುರ್ಗ : ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು ವ್ಯತ್ಯಯ ಉಂಟಾಗಬಹುದು ಎಂಬ ಭೀತಿ ಸಾರ್ವಜನಿಕರಲ್ಲಿ ಮನೆ ಮಾಡಿದೆ. ಆದರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಅಡುಗೆ ಅನಿಲದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು, ಗ್ರಾಹಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಅಡುಗೆ ಅನಿಲ ಸರಬರಾಜುದಾರ ಕಂಪನಿಗಳಾದ ಐಒಸಿಎಲ್ ಮತ್ತು ಬಿಪಿಸಿಎಲ್ ಸೇಲ್ಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ಅಡುಗೆ ಅನಿಲ ಸಿಲಿಂಡರ್ ಪೂರೈಕೆ ಕುರಿತಂತೆ ಸೇಲ್ಸ್ ಅಧಿಕಾರಿಗಳಿಂದ ಸ್ಥಿತಿಗತಿ ಕುರಿತು ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಗೃಹ ಬಳಕೆಯ ಅಡುಗೆ ಅನಿಲದ ದಾಸ್ತಾನು ಸಮರ್ಪಕವಾಗಿದ್ದು, ಸರಬರಾಜು ಸಹಜ ಸ್ಥಿತಿಯಲ್ಲೇ ಮುಂದುವರಿಯಲಿದೆ. ಅಡುಗೆ ಅನಿಲ ಸಿಲಿಂಡರ್ ಸಿಗುವುದಿಲ್ಲ ಎಂಬ ತಪ್ಪು ಕಲ್ಪನೆ ಮತ್ತು ಭಯದಿಂದಾಗಿ, ಗ್ರಾಹಕರು ಗ್ಯಾಸ್ ಏಜೆನ್ಸಿಗಳ ಮುಂದೆ ಸಾಲುಗಟ್ಟಿ ನಿಲ್ಲುವ, ಮುಗಿಬೀಳುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಗೃಹ ಬಳಕೆಯ ಅಡುಗೆ ಅನಿಲದ ಸಿಲಿಂಡರ್ಗಳನ್ನು ವಾಣಿಜ್ಯ ಬಳಕೆಗೆ ಯಾವುದೇ ಗ್ರಾಹಕರು ನೀಡಿದ್ದು, ಕಂಡು ಬಂದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದ್ದಾರೆ.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ, ಐಒಸಿಎಲ್ ಸೇಲ್ಸ್ ಅಧಿಕಾರಿ ಭರತ್ ಚಂದ್ರ ಮತ್ತು ಬಿಪಿಸಿಎಲ್ ಸೇಲ್ಸ್ ಅಧಿಕಾರಿ ಸುಶ್ರಿಮ ಬೆಹ್ರ ಇದ್ದರು.
=========
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
