ದಾವಣಗೆರೆ: ರೈತರು ಬೆವರು ಸುರಿಸಿ ಬೆಳೆದಿದ್ದ ಚಿನ್ನದಂತಹ ಬೆಳೆ ಕಣ್ಣೆದುರೇ ಸುಟ್ಟು ಕರುಕಲಾದ ಮನಕಲಕುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಎರಗನಾಳ ಗ್ರಾಮದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿಯಾಗಿದೆ.
ಘಟನೆಯ ವಿವರ:
ಎರಗನಾಳ ಗ್ರಾಮದ ರೈತ ವೈರಬಸಪ್ಪ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು 70 ಕ್ವಿಂಟಲ್ ಮೆಕ್ಕೆಜೋಳವನ್ನು ರಾಶಿ ಮಾಡಿ ಸಂಗ್ರಹಿಸಿಟ್ಟಿದ್ದರು. ಆದರೆ ವಿಧಿಯಾಟ ಎನ್ನುವಂತೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸಂಪೂರ್ಣ ಮೆಕ್ಕೆಜೋಳ ಸುಟ್ಟು ಭಸ್ಮವಾಗಿದೆ. ಇದರಿಂದ ರೈತನಿಗೆ ಅಂದಾಜು 1.25 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ.
ಅದೇ ರೀತಿ, ಇದೇ ಗ್ರಾಮದ ಮತ್ತೊಬ್ಬ ರೈತ ಬಸಪ್ಪ ಅವರು ತಮ್ಮ ಎಂಟು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು 250 ಕ್ವಿಂಟಲ್ ಮೆಕ್ಕೆಜೋಳಕ್ಕೂ ಬೆಂಕಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಮೆಕ್ಕೆಜೋಳ ಕಪ್ಪು ಕರುಕಲಾಗಿದ್ದು, ಸುಮಾರು 3.50 ಲಕ್ಷ ರೂಪಾಯಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ:
ಬೆಳೆ ಉರಿಯುತ್ತಿರುವುದನ್ನು ಕಂಡು ಆತಂಕಕ್ಕೊಳಗಾದ ಗ್ರಾಮಸ್ಥರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಪ್ರಯತ್ನ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಆದರೂ ಅಷ್ಟರಲ್ಲಾಗಲೇ ರಾಶಿ ಹಾಕಿದ್ದ ಬಹುತೇಕ ಮೆಕ್ಕೆಜೋಳ ಬೆಂಕಿಗೆ ಆಹುತಿಯಾಗಿತ್ತು. ವರ್ಷವಿಡೀ ಕಷ್ಟಪಟ್ಟು ಬೆಳೆದ ಬೆಳೆ ಕೈಗೆ ಬರುವ ಸಮಯದಲ್ಲಿ ಹೀಗೆ ಸುಟ್ಟು ಹೋಗಿರುವುದು ರೈತ ಕುಟುಂಬಗಳನ್ನು ಸಂಕಷ್ಟಕ್ಕೆ ದೂಡಿದೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
