ದಾವಣಗೆರೆ: ಸೌಹಾರ್ಧಯುತವಾಗಿ ಯುಗಾದಿ, ರಂಜಾನ್ ಹಬ್ಬ ಆಚರಿಸಿ – ಶಾಂತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕರೆ

Davanagere District Peace Committee Meeting led by DC Gangadhara Swamy and SP Shekhar HT IPS for Ugadi and Ramzan festivals.
— ದಾವಣಗೆರೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಶಾಂತಿ ಸೌಹಾರ್ಧ ಸಭೆಯಲ್ಲಿ ಜಿಲ್ಲಾಧಿಕಾರಿ ಶ್ರೀ ಗಂಗಾಧರ ಸ್ವಾಮಿ ಜಿ.ಎಂ. ಮತ್ತು ಎಸ್ಪಿ ಶ್ರೀ ಶೇಖರ್ ಹೆಚ್.ಟಿ. ಉಪಸ್ಥಿತರಿದ್ದರು.

—Advertisement—

ದಾವಣಗೆರೆ: ಜಿಲ್ಲೆಯಲ್ಲಿ ಮುಂಬರುವ ಯುಗಾದಿ, ಷಬ್ ಎ ಕಾದರ್ ಹಾಗೂ ರಂಜಾನ್ ಹಬ್ಬಗಳನ್ನು ಅತ್ಯಂತ ಸಂಭ್ರಮ ಮತ್ತು ಸೌಹಾರ್ಧತೆಯಿಂದ ಆಚರಿಸುವಂತೆ ಜಿಲ್ಲಾಧಿಕಾರಿಗಳಾದ ಶ್ರೀ ಗಂಗಾಧರ ಸ್ವಾಮಿ ಜಿ.ಎಂ. ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ನಾಗರೀಕ ಸೌಹಾರ್ಧ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಆದ್ಯತೆ

ಹಬ್ಬಗಳ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ವಿವಿಧ ಸಮುದಾಯಗಳ ನಡುವೆ ಪರಸ್ಪರ ಪ್ರೀತಿ ಮತ್ತು ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಹಬ್ಬಗಳನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ

Davanagere District Peace Committee Meeting led by DC Gangadhara Swamy and SP Shekhar HT IPS for Ugadi and Ramzan festivals.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಶೇಖರ್ ಹೆಚ್.ಟಿ. (IPS) ಅವರು ಮಾತನಾಡಿ, ಹಬ್ಬಗಳ ಆಚರಣೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸರ್ವ ಸನ್ನದ್ಧವಾಗಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು ಮತ್ತು ಯಾವುದೇ ಸಂಶಯಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಸಭೆಯ ಪ್ರಮುಖಾಂಶಗಳು:

  • ಅಧಿಕಾರಿಗಳ ಭಾಗಿ: ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಪರಮೇಶ್ವರ ಹೆಗಡೆ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಅಗತ್ಯ ಸಲಹೆಗಳನ್ನು ನೀಡಿದರು.

  • ಸಮುದಾಯದ ಒಗ್ಗಟ್ಟು: ಜಿಲ್ಲೆಯ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಪ್ರಮುಖ ಮುಖಂಡರು ಸಭೆಯಲ್ಲಿ ಪಾಲ್ಗೊಂಡು, ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಲು ಆಡಳಿತದೊಂದಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

  • ಸಾಮಾಜಿಕ ಸಾಮರಸ್ಯ: ದಾವಣಗೆರೆ ಜಿಲ್ಲೆಯ ಸೌಹಾರ್ಧ ಪರಂಪರೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಉಭಯ ಕೋಮುಗಳ ಮುಖಂಡರು ಒಮ್ಮತದ ನಿರ್ಧಾರ ಪ್ರಕಟಿಸಿದರು.

ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕ ಮುಖಂಡರು ಉಪಸ್ಥಿತರಿದ್ದರು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp