ದಾವಣಗೆರೆ: ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ಮಳೆರಾಯ ಅಬ್ಬರಿಸಿದ್ದು, ನಗರದಾದ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೇವಲ ಒಂದು ಗಂಟೆಯ ಮಳೆಗೆ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದು, ಸಾರ್ವಜನಿಕರು ಹರಸಾಹಸ ಪಡುವಂತಾಗಿದೆ.
ಪ್ರಮುಖ ರಸ್ತೆಗಳು ಜಲಾವೃತ
ನಗರದ ಪಿ.ಬಿ. ರಸ್ತೆ, ಗಾಂಧಿ ಸರ್ಕಲ್ ಮತ್ತು ಪ್ರಮುಖ ಬಡಾವಣೆಗಳಲ್ಲಿ ಮಳೆ ನೀರು ಮೊಣಕಾಲು ಮಟ್ಟಕ್ಕೆ ನಿಂತಿದೆ. ಇದರಿಂದಾಗಿ ದ್ವಿಚಕ್ರ ವಾಹನಗಳು ನೀರಿನಲ್ಲೇ ಸಿಲುಕಿಕೊಂಡಿದ್ದು, ಸವಾರರು ತಮ್ಮ ವಾಹನಗಳನ್ನು ತಳ್ಳಿಕೊಂಡು ಹೋಗುತ್ತಿರುವ ದೃಶ್ಯಗಳು ಕಂಡುಬಂದವು.
ಅಂಡರ್ಪಾಸ್ನಲ್ಲಿ ಅಪಾಯಕಾರಿ ಸಂಚಾರ
ವಿಶೇಷವಾಗಿ ನಗರದ ರೈಲ್ವೇ ಅಂಡರ್ಪಾಸ್ಗಳಲ್ಲಿ ಮಳೆ ನೀರು ತುಂಬಿಕೊಂಡಿದ್ದು, ಬಸ್ಗಳು ಮತ್ತು ಲಾರಿಗಳು ನೀರಿನಲ್ಲೇ ಅಪಾಯಕಾರಿಯಾಗಿ ಚಲಿಸುತ್ತಿವೆ. ಎವಿಕೆ ಕಾಲೇಜು ರಸ್ತೆ ಮತ್ತು ಎಂಸಿಸಿ ಬಿ ಬ್ಲಾಕ್ ಮುಂತಾದ ಕಡೆಗಳಲ್ಲಿ ಮಳೆ ನೀರಿನ ರಭಸಕ್ಕೆ ಜನರು ರಸ್ತೆ ದಾಟಲು ಸಾಧ್ಯವಾಗದೆ ಕಷ್ಟಪಡುತ್ತಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ವ್ಯಾಪಾರಸ್ಥರ ಆತಂಕ
ಮಳೆಯ ಆರ್ಭಟಕ್ಕೆ ತಗ್ಗು ಪ್ರದೇಶಗಳಲ್ಲಿರುವ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯ ಮೇಲೆಯೇ ನೀರು ಹರಿಯುತ್ತಿದ್ದು, ಸಾರ್ವಜನಿಕರು ಪಾಲಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
