ದಾವಣಗೆರೆ: ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಭರ್ಜರಿ ತಯಾರಿ ನಡೆದಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಶ್ರೀನಿವಾಸ್ ದಾಸಕರಿಯಪ್ಪ ಅವರು ಇಂದು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ಬಣ ರಾಜಕೀಯಕ್ಕೆ ತೆರೆ: ಅಜಯ್ ಕುಮಾರ್ ಸಾಥ್
ಈ ಬಾರಿಯ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆಯಲ್ಲಿ ಎಲ್ಲರ ಗಮನ ಸೆಳೆದಿದ್ದು ಮಾಜಿ ಮೇಯರ್ ಬಿ.ಜಿ. ಅಜಯ್ ಕುಮಾರ್ ಅವರ ಉಪಸ್ಥಿತಿ. ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದ್ದ ಅಜಯ್ ಕುಮಾರ್ ಅವರು, ಇಂದು ಅಭ್ಯರ್ಥಿ ಶ್ರೀನಿವಾಸ್ ಅವರ ಬೆನ್ನಿಗೆ ನಿಲ್ಲುವ ಮೂಲಕ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳಿಗೆ ಸಂಪೂರ್ಣ ತೆರೆ ಎಳೆದರು. ಅಭ್ಯರ್ಥಿಯ ಜೊತೆಗೂಡಿ ಪಾಲಿಕೆಗೆ ಆಗಮಿಸಿದ ಅವರು, ಬಿಜೆಪಿಯ ಒಗ್ಗಟ್ಟನ್ನು ಪ್ರದರ್ಶಿಸಿದರು.

ಗಣ್ಯರ ಉಪಸ್ಥಿತಿ
ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಹಿರಿಯ ನಾಯಕರಾದ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್ ಸೇರಿದಂತೆ ಜಿಲ್ಲಾ ಮತ್ತು ರಾಜ್ಯ ಮಟ್ಟದ ಹಲವು ಪ್ರಮುಖ ಪದಾಧಿಕಾರಿಗಳು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಮುಖಂಡರು, “ಕ್ಷೇತ್ರದ ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆಯ ದೃಷ್ಟಿಯಿಂದ ನಾವೆಲ್ಲರೂ ಒಂದಾಗಿದ್ದೇವೆ. ಈ ಬಾರಿ ದಕ್ಷಿಣ ಕ್ಷೇತ್ರದಲ್ಲಿ ಕಮಲ ಅರಳುವುದು ನಿಶ್ಚಿತ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಈ ಸ್ಥಾನವನ್ನು ಮರಳಿ ಪಡೆಯಲು ಬಿಜೆಪಿ ಈ ಬಾರಿ ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಈಗಾಗಲೇ ಬಿರುಸಿನ ಪ್ರಚಾರ ಆರಂಭವಾಗಿದ್ದು, ಇಂದಿನ ನಾಮಪತ್ರ ಸಲ್ಲಿಕೆಯು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ.

ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
