ದಾವಣಗೆರೆ ದಕ್ಷಿಣ ಉಪಚುನಾವಣೆ: ಮಾರ್ಚ್ 23ಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಸಮರ್ಥ್ ನಾಮಪತ್ರ ಸಲ್ಲಿಕೆ; ಸಿಎಂ, ಡಿಸಿಎಂ ಭಾಗಿ

ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಸಮರ್ಥ್ ಮತ್ತು ಮುಖಂಡರ ಪತ್ರಿಕಾಗೋಷ್ಠಿ
— ಮಾರ್ಚ್ 23 ರಂದು ನಾಮಪತ್ರ ಸಲ್ಲಿಸಲಿರುವ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಸಮರ್ಥ್ ಅವರ ಮೆರವಣಿಗೆಯ ಸಿದ್ಧತೆ ಕುರಿತು ಜಿಲ್ಲಾಧ್ಯಕ್ಷ ಮಂಜಪ್ಪ ಮಾಹಿತಿ ನೀಡಿದರು.

—Election Update—

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಮನೂರು ಸಮರ್ಥ್ ಅವರು ಮಾರ್ಚ್ 23ರಂದು ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಈ ಕುರಿತು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಶಕ್ತಿ ಪ್ರದರ್ಶನ ಮತ್ತು ಮೆರವಣಿಗೆ:

ಸೋಮವಾರ ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ನಂತರ ಶಿವಾಜಿ ಪುತ್ತಳಿಗೆ ಮಾಲಾರ್ಪಣೆ ಮಾಡಿ, ಕಡಕ್ ಶಾವಲಿ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಾಗುವುದು. ಅಲ್ಲಿಂದ ಹಳೆಪೇಟೆ, ದಿಬ್ಬ ಸರ್ಕಲ್, ಗಾಂಧಿನಗರ, ಆಜಾದ್ ನಗರ, ಅಹಮದ್ ನಗರ, ಚಾರ್ಲಿ ಪೈಲ್ವಾನ್ ಸರ್ಕಲ್ ಮತ್ತು ಚಾಮರಾಜಪೇಟೆ ಮಾರ್ಗವಾಗಿ ಬೃಹತ್ ಮೆರವಣಿಗೆ ನಡೆಯಲಿದೆ. ಅಂತಿಮವಾಗಿ ಮಹಾನಗರ ಪಾಲಿಕೆಗೆ ಆಗಮಿಸಿ ನಾಮಪತ್ರ ಸಲ್ಲಿಸಲಾಗುವುದು.

ಗಣ್ಯರ ಉಪಸ್ಥಿತಿ:

ಈ ಮಹತ್ವದ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ಅಭ್ಯರ್ಥಿಗೆ ಬೆಂಬಲ ಸೂಚಿಸಲಿದ್ದಾರೆ. ಇವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರದ ಪ್ರಮುಖ ಮುಖಂಡರು ಉಪಸ್ಥಿತರಿರಲಿದ್ದಾರೆ.

25 ಸಾವಿರ ಜನ ಸೇರುವ ನಿರೀಕ್ಷೆ:

ಈ ನಾಮಪತ್ರ ಸಲ್ಲಿಕೆ ಕಾರ್ಯಕ್ರಮವು ಕಾಂಗ್ರೆಸ್ ಪಾಲಿಗೆ ಒಂದು ದೊಡ್ಡ ಶಕ್ತಿ ಪ್ರದರ್ಶನವಾಗಲಿದ್ದು, ಸುಮಾರು 20 ರಿಂದ 25 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಮತ್ತು ಅಭಿಮಾನಿಗಳು ಮೆರವಣಿಗೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಮಂಜಪ್ಪ ತಿಳಿಸಿದ್ದಾರೆ.

​ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ಕೆ. ಚಮನ್ ಸಾಬ್, ಅನಿತಾಬಾಯಿ ಸೇರಿದಂತೆ ಹಲವು ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp