ದಾವಣಗೆರೆ ದಕ್ಷಿಣ ಉಪಚುನಾವಣೆ: ಕುರುಬ ಸಮಾಜದ ಯುವಕರಿಂದ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ಅದ್ಧೂರಿ ಸನ್ಮಾನ

ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ಕುರುಬ ಸಮಾಜದ ಯುವಕರಿಂದ ಸನ್ಮಾನ.
— ದಾವಣಗೆರೆಯಲ್ಲಿ ಪ್ರಚಾರದ ವೇಳೆ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ಕಂಬಳಿ ಹೊದಿಸಿ ಸನ್ಮಾನಿಸಿದ ಕುರುಬ ಸಮಾಜದ ಯುವಕರು.

—Election Update—

ದಾವಣಗೆರೆ: ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ಕ್ಷೇತ್ರದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ನಗರದ ವಿವಿಧ ವಾರ್ಡ್‌ಗಳಲ್ಲಿ ಸಮರ್ಥ್ ಅವರು ಬಿರುಸಿನ ಪ್ರಚಾರ ನಡೆಸುತ್ತಿದ್ದ ವೇಳೆ, ಕುರುಬ ಸಮಾಜದ ಯುವಕರು ಅವರಿಗೆ ಆತ್ಮೀಯವಾಗಿ ಗೌರವ ಸಲ್ಲಿಸಿದರು.

ಕಂಬಳಿ ಹೊದಿಸಿ ಶುಭ ಹಾರೈಕೆ

ಪ್ರಚಾರದ ಹಾದಿಯಲ್ಲಿ ಸಮರ್ಥ್ ಮಲ್ಲಿಕಾರ್ಜುನ ಅವರನ್ನು ಅಡ್ಡಗಟ್ಟಿದ ಕುರುಬ ಸಮಾಜದ ಯುವಕರು, ಸಂಪ್ರದಾಯದಂತೆ ಕಂಬಳಿ ಹೊದಿಸಿ ಹಾಗೂ ಮಾಲಾರ್ಪಣೆ ಮಾಡುವ ಮೂಲಕ ಆತ್ಮೀಯವಾಗಿ ಸನ್ಮಾನಿಸಿದರು. ಯುವ ನಾಯಕನ ರಾಜಕೀಯ ಪಯಣ ಯಶಸ್ವಿಯಾಗಲಿ ಮತ್ತು ಮುಂಬರುವ ಚುನಾವಣೆಯಲ್ಲಿ ಜಯಭೇರಿ ಬಾರಿಸಲಿ ಎಂದು ಸಮಾಜದ ಯುವಕರು ಈ ಸಂದರ್ಭದಲ್ಲಿ ಶುಭ ಹಾರೈಸಿದರು.

ಯುವಕರ ಬೆಂಬಲಕ್ಕೆ ಸಮರ್ಥ್ ಕೃತಜ್ಞತೆ

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಮರ್ಥ್ ಮಲ್ಲಿಕಾರ್ಜುನ ಅವರು, “ಯುವ ಸಮೂಹದ ಈ ಪ್ರೀತಿ ಮತ್ತು ವಿಶ್ವಾಸ ನನಗೆ ಹೆಚ್ಚಿನ ಶಕ್ತಿ ನೀಡಿದೆ. ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ. ನಿಮ್ಮೆಲ್ಲರ ಬೆಂಬಲ ಹೀಗೆಯೇ ಇರಲಿ” ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ನಾಗರಾಜ್ ಹಾಗೂ ನೂರಾರು ಸಮಾಜದ ಯುವಕರು, ಮುಖಂಡರು ಭಾಗವಹಿಸಿ ತಮ್ಮ ಬೆಂಬಲ ಸೂಚಿಸಿದರು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp