ದಾವಣಗೆರೆ: ಜಿಲ್ಲೆಯ ರಾಜಕೀಯ ಕಣದಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಭಾರಿ ಕುತೂಹಲ ಮೂಡಿಸಿದೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಮಾರ್ಚ್ 23ರಂದು ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಹಿರಿಯ ಬಿಜೆಪಿ ಮುಖಂಡ ಯಶವಂತರಾವ್ ಜಾಧವ್ ಅವರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
ಒಟ್ಟು 38 ಅಭ್ಯರ್ಥಿಗಳಿಂದ 45 ನಾಮಪತ್ರ ಸಲ್ಲಿಕೆ
ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ನಡೆಯುತ್ತಿರುವ ಈ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳು ಭಾರಿ ಉತ್ಸಾಹ ತೋರಿದ್ದಾರೆ. ಕೊನೆಯ ದಿನದ ಅಂತ್ಯಕ್ಕೆ ಒಟ್ಟು 38 ಅಭ್ಯರ್ಥಿಗಳಿಂದ 45 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ. ಇದರಲ್ಲಿ ಯಶವಂತರಾವ್ ಜಾಧವ್ ಅವರ ನಾಮಪತ್ರವೂ ಸೇರಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಟಿಕೆಟ್ ಕೈತಪ್ಪಿದರೂ ನಾಮಪತ್ರ ಸಲ್ಲಿಸಿದ ಜಾಧವ್: ಅಸಲಿ ಕಾರಣವೇನು?
ಯಶವಂತರಾವ್ ಜಾಧವ್ ಅವರು ಈ ಹಿಂದೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಾಲ್ಕು ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ವಿರುದ್ಧ ಪರಾಜಿತಗೊಂಡಿದ್ದರು. ಈ ಬಾರಿಯೂ ಅವರು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ಈ ಬಾರಿ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಿದೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಪಕ್ಷದ ಅಧಿಕೃತ ಅಭ್ಯರ್ಥಿ ಘೋಷಣೆಯಾಗಿದ್ದರೂ ಜಾಧವ್ ನಾಮಪತ್ರ ಸಲ್ಲಿಸಿರುವುದು ಬಂಡಾಯದ ಮುನ್ಸೂಚನೆಯೇ ಎಂಬ ಪ್ರಶ್ನೆ ಕಾಡಿತ್ತು. ಆದರೆ, ಇದು ಪಕ್ಷದ ಹಿತದೃಷ್ಟಿಯಿಂದ ಕೈಗೊಂಡ ಮುನ್ನೆಚ್ಚರಿಕೆ ಕ್ರಮ ಎನ್ನಲಾಗಿದೆ. ಒಂದು ವೇಳೆ ತಾಂತ್ರಿಕ ಕಾರಣಗಳಿಂದಾಗಿ ಅಧಿಕೃತ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ನಾಮಪತ್ರ ತಿರಸ್ಕೃತಗೊಂಡರೆ, ಬಿಜೆಪಿ ಪರವಾಗಿ ಕಣದಲ್ಲಿ ಅಭ್ಯರ್ಥಿ ಇಲ್ಲದಂತಾಗಬಾರದು ಎಂಬ ಕಾರಣಕ್ಕೆ ಜಾಧವ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಮಾರ್ಚ್ 26ಕ್ಕೆ ಅಂತಿಮ ತೀರ್ಮಾನ
ಪಕ್ಷದ ಮೂಲಗಳ ಪ್ರಕಾರ, ಶ್ರೀನಿವಾಸ್ ದಾಸಕರಿಯಪ್ಪ ಅವರ ನಾಮಪತ್ರ ಕ್ರಮಬದ್ಧವಾಗಿ ಅಂಗೀಕಾರಗೊಂಡಲ್ಲಿ, ಮಾರ್ಚ್ 26ರಂದು ಯಶವಂತರಾವ್ ಜಾಧವ್ ಅವರು ತಮ್ಮ ನಾಮಪತ್ರವನ್ನು ಹಿಂಪಡೆಯಲಿದ್ದಾರೆ.
30 ವರ್ಷಗಳ ಕಾಂಗ್ರೆಸ್ ಆಡಳಿತಕ್ಕೆ ಮುಕ್ತಿ ಹಾಡುವರೇ ಮತದಾರರು?
ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಅಭಿವೃದ್ಧಿಯ ವಿಷಯದಲ್ಲಿ ಮತದಾರರಲ್ಲಿ ಅಸಮಾಧಾನವಿದೆ ಎಂಬ ಮಾತುಗಳು ಕೇಳಿಬರುತ್ತಿವೆ. “ಕಳೆದ ಮೂರು ದಶಕಗಳಿಂದ ಬದಲಾವಣೆ ಕಂಡಿಲ್ಲ, ಈ ಬಾರಿ ಬಿಜೆಪಿಗೆ ಒಂದು ಅವಕಾಶ ನೀಡಬೇಕು” ಎಂಬ ಕೂಗು ಕ್ಷೇತ್ರದಲ್ಲಿ ಬಲವಾಗಿ ಕೇಳಿಬರುತ್ತಿದೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
