ದಾವಣಗೆರೆ ದಕ್ಷಿಣ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಭರ್ಜರಿ ಮತಬೇಟೆ; ಕಮಲ ಅರಳುವ ವಿಶ್ವಾಸ!

ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವುದು.
— ದಾವಣಗೆರೆ ದಕ್ಷಿಣ ಉಪಚುನಾವಣೆ: 13ನೇ ವಾರ್ಡ್‌ನಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸುತ್ತಿರುವ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ.

—Election Update—

ದಾವಣಗೆರೆ: ಜಿಲ್ಲೆಯ ರಾಜಕೀಯದ ಕೇಂದ್ರಬಿಂದುವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ಈಗ ರಂಗೇರಿದೆ. ದಿನೇ ದಿನೆ ಚುನಾವಣಾ ಕಾವು ಹೆಚ್ಚುತ್ತಿದ್ದು, ಅಭ್ಯರ್ಥಿಗಳು ಮತದಾರರ ಮನ ಗೆಲ್ಲಲು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಇಂದು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ಕ್ಷೇತ್ರದಲ್ಲಿ ಭರ್ಜರಿ ಮತಬೇಟೆ ನಡೆಸುವ ಮೂಲಕ ಗಮನ ಸೆಳೆದರು.

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ

ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 13ನೇ ವಾರ್ಡ್‌ನ ದೇವರಾಜನಗರದಲ್ಲಿರುವ ಆಂಜನೇಯ ದೇವಸ್ಥಾನದಿಂದ ಶ್ರೀನಿವಾಸ್ ದಾಸಕರಿಯಪ್ಪ ಅವರು ತಮ್ಮ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದರು. ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ, ನೂರಾರು ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ: ಬದಲಾವಣೆಗೆ ಕರೆ

ಪ್ರಚಾರದ ವೇಳೆ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಶ್ರೀನಿವಾಸ್ ದಾಸಕರಿಯಪ್ಪ, “ಹಲವು ವರ್ಷಗಳಿಂದ ಇಲ್ಲಿ ಕಾಂಗ್ರೆಸ್ ಗೆಲ್ಲುತ್ತಾ ಬಂದಿದೆ. ಆದರೆ ನಿಮ್ಮ ಪರಿಸ್ಥಿತಿ ಏನಾಗಿದೆ ನೋಡಿ. ಅಭಿವೃದ್ಧಿಯ ಹೆಸರಿನಲ್ಲಿ ಜನರಿಗೆ ಅನ್ಯಾಯವಾಗುತ್ತಿದೆ. ಈ ಬಾರಿ ಬದಲಾವಣೆಗಾಗಿ ಬಿಜೆಪಿಗೆ ಒಂದು ಅವಕಾಶ ನೀಡಿ,” ಎಂದು ಮನವಿ ಮಾಡಿದರು. ಅಲ್ಲದೆ, ದಕ್ಷಿಣ ಕ್ಷೇತ್ರದಲ್ಲಿ ಈ ಬಾರಿ ‘ಕಮಲ’ ಅರಳುವುದು ನಿಶ್ಚಿತ ಎಂಬ ಬಲವಾದ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ನಾಯಕರ ಮತ್ತು ಕಾರ್ಯಕರ್ತರ ಸಾಥ್

ಅಭ್ಯರ್ಥಿಯ ಈ ಬಿರುಸಿನ ಪ್ರಚಾರಕ್ಕೆ ಬಿಜೆಪಿ ಪ್ರಮುಖ ಮುಖಂಡರಾದ ಅಜಯ್ ಕುಮಾರ್, ಯಶವಂತರಾವ್ ಜಾದವ್, ರಾಜನಳ್ಳಿ ಶಿವಕುಮಾರ್ ಸೇರಿದಂತೆ ಹಲವು ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಸಾಥ್ ನೀಡಿದರು. ಪ್ರಚಾರದುದ್ದಕ್ಕೂ ಬಿಜೆಪಿ ಪರ ಘೋಷಣೆಗಳು ಮೊಳಗಿದವು, ಇದು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp