ದಾವಣಗೆರೆ: ರಾಜ್ಯ ರಾಜಕಾರಣದ ಕೇಂದ್ರಬಿಂದು ದಾವಣಗೆರೆಯಲ್ಲಿ ಈಗ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ವಿರುದ್ಧ ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಹಿರಂಗವಾಗಿಯೇ ‘ಗೋ ಬ್ಯಾಕ್ ಕಾಂಗ್ರೆಸ್’ ಘೋಷಣೆ ಕೂಗುವ ಮೂಲಕ ಬಂಡಾಯ ಎದ್ದಿದ್ದಾರೆ.
ಸ್ವಾಭಿಮಾನದ ಚುನಾವಣೆ: ಸಂಧಾನಕ್ಕೆ ನಕಾರ
ಕ್ಷೇತ್ರದ ಪ್ರಭಾವಿ ಮುಖಂಡ ಸಾದಿಕ್ ಪೈಲ್ವಾನ್ ಮತ್ತು ಮೊಹಮ್ಮದ್ ವಾಸಿಂ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗದಿರುವುದನ್ನು ಖಂಡಿಸಿರುವ ಬೆಂಬಲಿಗರು, ಇದು ಕೇವಲ ಚುನಾವಣೆ ಅಲ್ಲ, ನಮ್ಮ ‘ಸ್ವಾಭಿಮಾನದ ಹೋರಾಟ’ ಎಂದು ಕರೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ನಡೆಸಲು ಉದ್ದೇಶಿಸಿರುವ ಯಾವುದೇ ಸಂಧಾನಕ್ಕೂ ನಾವು ಒಪ್ಪುವುದಿಲ್ಲ. ನಮ್ಮ ನಾಯಕರಿಗೆ ಬೆಲೆ ಇಲ್ಲದ ಕಡೆ ನಾವಿರುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮನೆ ಮನೆಗೆ ಹೋಗಿ ಕಾಂಗ್ರೆಸ್ ವಿರುದ್ಧ ಪ್ರಚಾರ!
ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಾ, “ನಾವು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವುದಿಲ್ಲ ಮಾತ್ರವಲ್ಲದೆ, ಮನೆ ಮನೆಗೆ ತೆರಳಿ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸುವಂತೆ ಅಥವಾ ನೋಟಾ (NOTA) ಒತ್ತುವಂತೆ ಜನರಲ್ಲಿ ಜಾಗೃತಿ ಮೂಡಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ. ಸಾದಿಕ್ ಪೈಲ್ವಾನ್ ಅವರೊಂದಿಗೆ ಸುಮಾರು 50 ಸಾವಿರಕ್ಕೂ ಅಧಿಕ ಮತದಾರರ ಬೆಂಬಲವಿದೆ ಎಂದು ಮುಖಂಡರು ಹಕ್ಕು ಮಂಡಿಸಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಸಿದ್ದವಾಗಿದೆ ‘ಪ್ಲಾನ್ ಬಿ’ (Plan-B)!
ಕಾಂಗ್ರೆಸ್ ಪಕ್ಷದ ಕುತಂತ್ರಗಳಿಗೆ ಉತ್ತರ ನೀಡಲು ನಮ್ಮ ಬಳಿ ‘ಪ್ಲಾನ್ ಬಿ’ ಸಿದ್ಧವಿದೆ. ಇದನ್ನು ಸದ್ಯಕ್ಕೆ ಬಹಿರಂಗಪಡಿಸುವುದಿಲ್ಲ, ಬದಲಾಗಿ ಮತದಾನದ ನಂತರ ಫಲಿತಾಂಶ ಬಂದಾಗ ಕಾಂಗ್ರೆಸ್ ನಾಯಕರಿಗೆ ನಮ್ಮ ಶಕ್ತಿ ಏನೆಂಬುದು ತಿಳಿಯಲಿದೆ ಎಂದು ಮುಖಂಡರು ಗುಡುಗಿದ್ದಾರೆ. “ನಮಗೆ ಬೆನ್ನಿಗೆ ಚೂರಿ ಹಾಕಿದವರಿಗೆ, ನಾವು ಈ ಬಾರಿ ಕಣ್ಣಿಗೆ ಕಣ್ಣಿಟ್ಟು ಪಾಠ ಕಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ ಉತ್ತರದಲ್ಲಿ ಅಭಿವೃದ್ಧಿ ಶೂನ್ಯ
ಕಳೆದ ಅವಧಿಯಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಯಾವುದೇ ಗಣನೀಯ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಕೇವಲ ಅಣ್ಣ-ತಮ್ಮ ಎಂಬ ಭಾವನಾತ್ಮಕ ಮಾತುಗಳಿಂದ ಮತ ಪಡೆಯಲು ಸಾಧ್ಯವಿಲ್ಲ. ಅಲ್ಪಸಂಖ್ಯಾತರನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕಾರ್ಯಕರ್ತರು ಕಿಡಿಕಾರಿದ್ದಾರೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
