ಚಿತ್ರದುರ್ಗ: ಜನಸಂಖ್ಯೆ ನಿಯಂತ್ರಣ ಹಾಗೂ ತಾಯಿ-ಮಗುವಿನ ಸುಸ್ಥಿರ ಆರೋಗ್ಯಕ್ಕಾಗಿ ಸಾರ್ವಜನಿಕರು ನೂತನ ಗರ್ಭನಿರೋಧಕ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ (DHO) ಡಾ. ಜಿ.ಪಿ. ರೇಣುಪ್ರಸಾದ್ ತಿಳಿಸಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ‘ಕುಟುಂಬ ಕಲ್ಯಾಣ ಕಾರ್ಯಕ್ರಮ: ನೂತನ ಗರ್ಭನಿರೋಧಕಗಳು ಮತ್ತು ಡಿಂಪಾ ಚುಚ್ಚುಮದ್ದು’ ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯದ ಹಿತದೃಷ್ಟಿಯಿಂದ ಅಂತರ ಅಗತ್ಯ:
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
“ಒಂದು ಮಗುವಿನಿಂದ ಮತ್ತೊಂದು ಮಗುವಿಗೆ ಕನಿಷ್ಠ ಮೂರು ವರ್ಷಗಳ ಅಂತರವಿರುವುದು ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿರುವ ಆಧುನಿಕ ಮತ್ತು ಸುರಕ್ಷಿತ ಗರ್ಭನಿರೋಧಕಗಳನ್ನು ಬಳಸುವ ಬಗ್ಗೆ ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು,” ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗುಣಮಟ್ಟದ ಸೇವೆಗೆ ಆದ್ಯತೆ:
ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಡಿ.ಎಂ. ಅಭಿನವ ಮಾತನಾಡಿ, “ಸಾರ್ವಜನಿಕರಿಗೆ ಗುಣಮಟ್ಟದ ಹೆರಿಗೆ ಮತ್ತು ಕುಟುಂಬ ಯೋಜನೆ ಸೇವೆಗಳನ್ನು ಒದಗಿಸುವುದು ನಮ್ಮ ಆದ್ಯತೆಯಾಗಬೇಕು. ತುರ್ತು ಸಂದರ್ಭಗಳಲ್ಲಿ ಔಷಧಿಗಳ ಕೊರತೆಯಾಗದಂತೆ ‘ಆರೋಗ್ಯ ರಕ್ಷಾ ಸಮಿತಿ’ಯ ಅನುದಾನವನ್ನು ಬಳಸಿಕೊಂಡು ಸಾರ್ವಜನಿಕರಿಗೆ ನಿರಂತರ ಸೇವೆ ನೀಡಬೇಕು,” ಎಂದರು.
ತಜ್ಞರಿಂದ ತರಬೇತಿ:
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಭರಮಸಾಗರ ಸಿ.ಎಚ್.ಸಿ.ಯ ಸ್ತ್ರೀರೋಗ ತಜ್ಞ ಡಾ. ವಿನಯ್ ರಾಜ್ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಡಿಂಪಾ (DMPA) ಚುಚ್ಚುಮದ್ದು ಹಾಗೂ ಇತರ ತಾತ್ಕಾಲಿಕ ಗರ್ಭನಿರೋಧಕ ವಿಧಾನಗಳ ಬಗ್ಗೆ ತಾಂತ್ರಿಕ ಮಾಹಿತಿ ನೀಡಿದರು. ಜಿ.ಎನ್. ಕೆರೆ ಆಡಳಿತ ವೈದ್ಯಾಧಿಕಾರಿ ಶಶಿಕಿರಣ್ ಅವರು ತುರ್ತು ಗರ್ಭನಿರೋಧಕ ಮಾತ್ರೆಗಳ ಬಳಕೆಯ ಕುರಿತು ಸಿಬ್ಬಂದಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗುಣಮಟ್ಟ ಸಲಹೆಗಾರರಾದ ಡಾ. ರೇಖಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ, ಶುಶ್ರೂಷಾಧಿಕಾರಿ ಸರಸ್ವತಿ ಸೇರಿದಂತೆ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸುರಕ್ಷತಾಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
