ಗೃಹಲಕ್ಷ್ಮಿ ಯೋಜನೆಯ 29ನೇ ಕಂತು ಬಿಡುಗಡೆ: ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ

—Advertisement—

ಚಿತ್ರದುರ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ 29ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಮುಂದಿನ ಎರಡ್ಮೂರು ದಿನಗಳಲ್ಲಿ ಜಿಲ್ಲೆಯ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಒಟ್ಟು 3,88,341 ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದ್ದು, ಈ ಕಂತಿಗಾಗಿ ಸರ್ಕಾರ ಒಟ್ಟು ರೂ.77,66,82,000/- ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

ಆರ್ಥಿಕ ಭದ್ರತೆ

ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ. ಕುಟುಂಬದ ಮುಖ್ಯ ಮಹಿಳೆಗೆ ಪ್ರತಿ ತಿಂಗಳು ರೂ.2000/- ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡುವ ಮೂಲಕ ಈ ಯೋಜನೆ ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಆರ್ಥಿಕ ಭದ್ರತೆಯ ಬೆಳಕು ತಂದಿದೆ.
ಈ ಯೋಜನೆಯ ಪ್ರಮುಖ ಉದ್ದೇಶ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು. ಮನೆ ನಡೆಸುವ ಹೊಣೆಗಾರಿಕೆಯನ್ನು ಹೊತ್ತಿರುವ ಮಹಿಳೆಯರಿಗೆ ಸರ್ಕಾರದಿಂದ ನೇರ ಸಹಾಯ ದೊರಕುವುದರಿಂದ ಅವರ ಆತ್ಮವಿಶ್ವಾಸವೂ ಹೆಚ್ಚಾಗಿದೆ. ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನೇಕ ಮಹಿಳೆಯರು ಈ ಹಣವನ್ನು ಮನೆಯ ಖರ್ಚು, ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಸಣ್ಣ ಉಳಿತಾಯಕ್ಕೆ ಬಳಸುತ್ತಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಆರಂಭವಾದ ನಂತರ ಮಹಿಳೆಯರ ಜೀವನದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಹಲವು ಕುಟುಂಬಗಳಲ್ಲಿ ಮಹಿಳೆಯರ ಮಾತಿಗೆ ಹೆಚ್ಚಿನ ಗೌರವ ದೊರಕುತ್ತಿದೆ. ಆರ್ಥಿಕ ಸಹಾಯದಿಂದ ಅವರು ತಮ್ಮ ಅಗತ್ಯಗಳನ್ನು ಸ್ವತಂತ್ರವಾಗಿ ಪೂರೈಸಿಕೊಳ್ಳುವ ಅವಕಾಶ ಪಡೆದಿದ್ದಾರೆ.

ಸಾಮಾಜಿಕ ಕ್ರಾಂತಿ

ಈ ಯೋಜನೆಯ ಮೂಲಕ ರಾಜ್ಯ ಸರ್ಕಾರ ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಗೃಹಲಕ್ಷ್ಮಿ ಯೋಜನೆ ಕೇವಲ ಹಣಕಾಸಿನ ಸಹಾಯವಲ್ಲ, ಮಹಿಳೆಯರ ಗೌರವ ಮತ್ತು ಆತ್ಮಸ್ಥೈರ್ಯ ಹೆಚ್ಚಿಸುವ ಸಾಮಾಜಿಕ ಕ್ರಾಂತಿಯಾಗಿದೆ. ಒಟ್ಟಿನಲ್ಲಿ, ಗೃಹಲಕ್ಷ್ಮಿ ಯೋಜನೆ ಕರ್ನಾಟಕದ ಮಹಿಳೆಯರಿಗೆ ಆಶಾಕಿರಣವಾಗಿದ್ದು, ಕುಟುಂಬಗಳ ಆರ್ಥಿಕ ಸ್ಥಿರತೆ ಹಾಗೂ ಸಮಾಜದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಈ ಯೋಜನೆ ಇನ್ನಷ್ಟು ಮಹಿಳೆಯರ ಬದುಕನ್ನು ಉತ್ತಮಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸುವುದು ಖಚಿತ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ ತಿಳಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp