ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ನಾಳೆ ಮತದಾನ!

ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರವಾಗಿ ಡಿಕೆ ಶಿವಕುಮಾರ್ ಪ್ರಚಾರ ಮಾಡುತ್ತಿರುವುದು.

—Election Update—

ದಾವಣಗೆರೆ: ಜಿಲ್ಲೆಯ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಣ ರಂಗೇರಿದ್ದು, ಮಂಗಳವಾರ ಸಂಜೆ ಬಹಿರಂಗ ಪ್ರಚಾರಕ್ಕೆ ಅಧಿಕೃತವಾಗಿ ತೆರೆಬಿದ್ದಿದೆ. ಅಂತಿಮ ದಿನದಂದು ರಾಜಕೀಯ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶನ ನಡೆಸಿದ್ದು, ಮತದಾರರ ಮನಗೆಲ್ಲಲು ಕಸರತ್ತು ನಡೆಸಿವೆ.

ದಾವಣಗೆರೆಯಲ್ಲಿ ಡಿಕೆಶಿ ಅಬ್ಬರ:

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬೃಹತ್ ರೋಡ್ ಶೋ ನಡೆಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಈ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ವಿಶೇಷವಾಗಿ, ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿ ಗಮನ ಸೆಳೆದರು.

ನಾಳೆ ಮತದಾನ:

ಬಹಿರಂಗ ಪ್ರಚಾರ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಈಗ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ. ಏಪ್ರಿಲ್ 9 (ಗುರುವಾರ) ಬೆಳಿಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಚುನಾವಣಾ ಆಯೋಗವು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಮತದಾರರು ಯಾರಿಗೆ ಮಣೆ ಹಾಕಲಿದ್ದಾರೆ ಎಂಬ ಕುತೂಹಲ ಮೂಡಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp