ಎರಡು ಬಾರಿ ಸಿಎಂ ಆದ್ರೂ ಬೆಂಗಳೂರಲ್ಲಿ ಸ್ವಂತ ಮನೆ ಇಲ್ಲ; ಸಿದ್ದರಾಮಯ್ಯ ಸರಳತೆ ಬಿಚ್ಚಿಟ್ಟ ಸುರೇಶ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಾಮಾಣಿಕತೆ ಬಗ್ಗೆ ಮಾತನಾಡುತ್ತಿರುವ ಸಚಿವ ಭೈರತಿ ಸುರೇಶ್

—Advertisement—

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರಳತೆ ಮತ್ತು ಪ್ರಾಮಾಣಿಕತೆಯನ್ನು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. “ಈ ದೇಶದಲ್ಲಿ ಯಾರಾದರೂ ಪ್ರಾಮಾಣಿಕ ರಾಜಕಾರಣಿ ಇದ್ದರೆ ಅದು ಸಿದ್ದರಾಮಯ್ಯನವರು ಮಾತ್ರ” ಎಂದು ಅವರು ಹೇಳಿದ್ದಾರೆ.

​ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅಧಿಕಾರಾವಧಿ ಮತ್ತು ಅವರ ಜೀವನಶೈಲಿಯ ಬಗ್ಗೆ ಹತ್ತಿರದಿಂದ ಕಂಡ ಹಲವು ವಿಚಾರಗಳನ್ನು ಹಂಚಿಕೊಂಡರು.

ಬೆಂಗಳೂರಿನಲ್ಲಿ ಸ್ವಂತ ಮನೆ ಇಲ್ಲದ ಮುಖ್ಯಮಂತ್ರಿ!

​ಸಿದ್ದರಾಮಯ್ಯ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಸುದೀರ್ಘ ಕಾಲ ಅಧಿಕಾರ ನಡೆಸಿದ್ದಾರೆ. “ಅವರು ಮನಸ್ಸು ಮಾಡಿದ್ದರೆ ಇಡೀ ಬೆಂಗಳೂರಿನ ಅರ್ಧ ಭಾಗವನ್ನೇ ಆಸ್ತಿಯನ್ನಾಗಿ ಮಾಡಿಕೊಳ್ಳುವ ಶಕ್ತಿ ಅವರಿಗಿತ್ತು. ನಾನು ನೂರಾರು ಬಾರಿ ಅವರಿಗೆ ಯಾವುದಾದರೂ ಒಂದು ಸೈಟ್ ತೆಗೆದುಕೊಂಡು ಮನೆ ಕಟ್ಟಿಸಿಕೊಳ್ಳಿ ಎಂದು ಒತ್ತಾಯಿಸಿದ್ದೆ. ಆದರೆ ಅವರು ಎಂದಿಗೂ ಹಣ ಅಥವಾ ಆಸ್ತಿಯ ಮೇಲೆ ಆಸೆ ಪಟ್ಟವರಲ್ಲ,” ಎಂದು ಸುರೇಶ್ ನೆನಪಿಸಿಕೊಂಡರು.

​ಸಾಮಾನ್ಯವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದವರೇ ಬೆಂಗಳೂರಿನಲ್ಲಿ ಹತ್ತಾರು ಸೈಟುಗಳನ್ನು ಹೊಂದಿರುತ್ತಾರೆ. ಆದರೆ ಇಷ್ಟು ದೊಡ್ಡ ಮಟ್ಟದ ನಾಯಕರಾಗಿದ್ದರೂ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನಲ್ಲಿ ಸ್ವಂತ ಮನೆ ಇಲ್ಲದಿರುವುದು ಅವರ ನಿಷ್ಠೆಗೆ ಸಾಕ್ಷಿ ಎಂದು ಅವರು ಬಣ್ಣಿಸಿದರು.

ಮಗ ಯತೀಂದ್ರ ಅವರೂ ಅಪ್ಪನ ಹಾದಿಯಲ್ಲೇ..

​ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, “ತಂದೆಯಂತೆಯೇ ಮಗನಿಗೂ ಆಸ್ತಿ, ಸೈಟುಗಳ ಮೇಲೆ ಆಸೆ ಇಲ್ಲ. ನನ್ನ ಮೈಸೂರಿನ ಮನೆ ಸಾಕು, 2028ರ ನಂತರ ಅಪ್ಪನ ಜೊತೆ ಮೈಸೂರಿಗೇ ಹೋಗಿ ನೆಲೆಸುತ್ತೇನೆ ಎಂದು ಅವರು ಹೇಳುತ್ತಾರೆ” ಎಂದರು.

ಬಡವರ ಪರ ಆಡಳಿತ

​ಸಿದ್ದರಾಮಯ್ಯ ಅವರ ಆಳ್ವಿಕೆಯಲ್ಲಿ ಕರ್ನಾಟಕದ ಎಲ್ಲ ವರ್ಗದ ಬಡವರು ಸುಖವಾಗಿದ್ದಾರೆ. ಜಾತಿ ಭೇದವಿಲ್ಲದೆ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ತಲುಪುತ್ತಿವೆ. ಅವರ ಮುಖ ನೋಡಿದರೆ ನಮಗೆ ಸಂತೋಷವಾಗುತ್ತದೆ ಎಂದು ಭೈರತಿ ಸುರೇಶ್ ಈ ಸಂದರ್ಭದಲ್ಲಿ ಭಾವನಾತ್ಮಕವಾಗಿ ಮಾತನಾಡಿದರು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp