,

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿಗೆ ಮನ್ನಣೆ; ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಅಸ್ತು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿನ ಮಾದರಿ

—Advertisement—

ನವದೆಹಲಿ: ಐಟಿ ಸಿಟಿ ಬೆಂಗಳೂರಿನಿಂದ ವಾಣಿಜ್ಯನಗರಿ ಮುಂಬೈಗೆ ನೂತನ “ವಂದೇ ಭಾರತ್ ಸ್ಲೀಪರ್ ರೈಲು” ಸಂಚಾರಕ್ಕೆ ಕೇಂದ್ರ ಸರ್ಕಾರ ಅಸ್ತು ಎಂದಿದೆ.

ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಸಂಪರ್ಕಕ್ಕೆ ಅನುಕೂಲವಾಗುವಂತೆ ನೂತನ ವಂದೇ ಭಾರತ್ ರೈಲು ಆರಂಭಿಸಲು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಮನವಿ ಸಲ್ಲಿಸಿ ಗಮನ ಸೆಳೆದಿದ್ದರು.

ಇದೀಗ ಕೇಂದ್ರ ಸರ್ಕಾರ, ಸಚಿವ ಜೋಶಿ ಅವರ ಮನವಿಗೆ ಸ್ಪಂದಿಸಿದ್ದು, ಕಲ್ಯಾಣ ಕರ್ನಾಟಕದ ಮಾರ್ಗವಾಗಿ ಬೆಂಗಳೂರು-ಮುಂಬೈ ಮಧ್ಯೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಅನುಮೋದನೆ ನೀಡಿದೆ.

ಈ ನೂತನ ರೈಲು ಕೆ‌ ಎಸ್ ಆರ್ ಬೆಂಗಳೂರು ನಿಲ್ದಾಣದಿಂದ ಕಲ್ಯಾಣ ಕರ್ನಾಟಕದ ಮೂಲಕ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಗೆ ಸಂಚರಿಸಲಿದೆ. ಬೆಂಗಳೂರಿನಿಂದ ಕರ್ನಾಟಕದ ಮಧ್ಯಭಾಗವಾದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ವಾಣಿಜ್ಯ ನಗರಿ ಮುಂಬೈಗೆ ‘ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್’ ರೈಲು ಕಲ್ಪಿಸುವಂತೆ ಸಚಿವ ಪ್ರಲ್ಹಾದ ಜೋಶಿ ಕೇಂದ್ರದ ಗಮನ ಸೆಳೆದಿದ್ದರು.

ಶೀಘ್ರವೇ ಈ ಸೂಪರ್ ಫಾಸ್ಟ್ ರೈಲು ಸಂಚಾರ ಪ್ರಾರಂಭಿಸಿ, ನಂತರದ ದಿನಗಳಲ್ಲಿ “ಅದನ್ನು ವಂದೇ ಭಾರತ್ ಸ್ಲೀಪರ್ ರೈಲು’ ಆಗಿ ಬದಲಾಯಿಸುವ ಜೋಶಿ ಅವರ ಪ್ರಸ್ತಾವನೆಗೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮನ್ನಣೆ ನೀಡಿದ್ದಾರೆ.

 

ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ:

ರಾಜ್ಯದ ಅಭಿವೃದ್ದಿ ಜತೆ ಕಲ್ಯಾಣ ಕರ್ನಾಟಕ ಭಾಗಕ್ಕೂ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದ್ದು, ಇದರಿಂದ ರಾಜ್ಯದಲ್ಲಿನ ವಾಣಿಜ್ಯ ಚಟುವಟಿಕೆಗಳ ಜೊತೆಗೆ ಉತ್ತಮ ಸಂಚಾರ ಸೌಲಭ್ಯವನ್ನೂ ಈ‌ ನೂತನ ವಂದೇ ಭಾರತ್ ರೈಲು ಬಲವರ್ಧಿಸಲಿದೆ ಎಂದಿರುವ ಸಚಿವ ಪ್ರಲ್ಹಾದ ಜೋಶಿ, ಪ್ರಧಾನಿ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp