ಏಪ್ರಿಲ್ 20ರಂದು ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ

Jagajyothi Sri Basaveshwara Jayanti celebration event poster and procession in Chitradurga.

—Advertisement—

ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಆಚರಣೆ ಸಮಾರಂಭ ಇದೇ ಏಪ್ರಿಲ್ 20ರಂದು ಮಧ್ಯಾಹ್ನ 3ಕ್ಕೆ ಚಿತ್ರದುರ್ಗ ನಗರದ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ ಸೇರಿದಂತೆ ಜಿಲ್ಲೆಯ ಸಮಸ್ತ ಗೌರವಾನ್ವಿತ ಜನಪ್ರತಿನಿಧಿಗಳು, ಚುನಾಯಿತ ನಗರಸಭಾ ಸದಸ್ಯರು ಹಾಗೂ ಜಿಲ್ಲೆಯ ವೀರಶೈವ ಸಮಾಜದ ಸಮಸ್ತ ಗೌರವಾನ್ವಿತ ಮುಖಂಡರು ಹಾಗೂ ಗಣ್ಯರು ಭಾಗವಹಿಸುವರು. ಶರಣ ಸಾಹಿತಿ ಪ್ರೊ.ಹೆಚ್.ಲಿಂಗಪ್ಪ ಉಪನ್ಯಾಸ ನೀಡುವರು. ಚಿತ್ರದುರ್ಗ ತಾಲ್ಲೂಕು ಆಯಿತೋಳು ಗ್ರಾಮದ ಜಗದೀಶ್ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ.

 

ಜಯಂತಿ ಅಂಗವಾಗಿ ಸಂಜೆ 4.30ಕ್ಕೆ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಆನೆಬಾಗಿಲು ದೊಡ್ಡಪೇಟೆ, ಮದಕರಿ ನಾಯಕ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ ಮಾರ್ಗವಾಗಿ ಶ್ರೀ ನೀಲಕಂಠೇಶ್ವರಸ್ವಾಮಿ ದೇವಸ್ಥಾನದವರೆಗೂ ವಿವಿಧ ಜಾನಪದ ಕಲಾತಂಡಗಳಿಂದ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp