ಚಿತ್ರದುರ್ಗದಲ್ಲಿ ಏಪ್ರಿಲ್ 23ರಂದು ಅದ್ಧೂರಿ ‘ಶ್ರೀ ಭಗೀರಥ ಜಯಂತಿ’ ಆಚರಣೆ

ಚಿತ್ರದುರ್ಗದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಶ್ರೀ ಭಗೀರಥ ಜಯಂತಿ

—Advertisement—

ಚಿತ್ರದುರ್ಗ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಇದೇ ಏಪ್ರಿಲ್ 23ರಂದು ನಗರದಲ್ಲಿ ಶ್ರೀ ಭಗೀರಥ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಾರ್ಯಕ್ರಮದ ಪ್ರಮುಖ ವಿವರಗಳು:

  • ದಿನಾಂಕ ಮತ್ತು ಸಮಯ: ಏಪ್ರಿಲ್ 23, ಬೆಳಿಗ್ಗೆ 11:00 ಗಂಟೆಗೆ.
  • ಸ್ಥಳ: ಮಹರ್ಷಿ ವಾಲ್ಮೀಕಿ ಭವನ, ಚಿತ್ರದುರ್ಗ.
  • ಉದ್ಘಾಟನೆ: ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
  • ಅಧ್ಯಕ್ಷತೆ: ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ.
  • ವಿಶೇಷ ಉಪನ್ಯಾಸ: ನಿವೃತ್ತ ಡಿವೈಎಸ್‍ಪಿ ಎಸ್. ನಾಗರಾಜ ಅವರಿಂದ ಭಗೀರಥ ಮಹರ್ಷಿಗಳ ಕುರಿತು ವಿಶೇಷ ಮಾತು.

ಆಕರ್ಷಕ ಮೆರವಣಿಗೆ:

​ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 9:30ಕ್ಕೆ ನಗರದ ಕನಕ ವೃತ್ತದಿಂದ ವಾಲ್ಮೀಕಿ ಭವನದವರೆಗೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಈ ಮೆರವಣಿಗೆಯು ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸಲಿದೆ.

ಗಣ್ಯರ ಉಪಸ್ಥಿತಿ:

​ಈ ಸಮಾರಂಭದಲ್ಲಿ ಸಂಸದ ಗೋವಿಂದ ಎಂ. ಕಾರಜೋಳ, ಶಾಸಕರುಗಳಾದ ಟಿ. ರಘುಮೂರ್ತಿ, ಬಿ.ಜಿ. ಗೋವಿಂದಪ್ಪ, ಎನ್.ವೈ. ಗೋಪಾಲಕೃಷ್ಣ, ಡಾ. ಎಂ. ಚಂದ್ರಪ್ಪ ಸೇರಿದಂತೆ ಜಿಲ್ಲೆಯ ಪ್ರಮುಖ ಜನಪ್ರತಿನಿಧಿಗಳು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ಉಪ್ಪಾರ ಸಂಘದ ಮುಖಂಡರು ಭಾಗವಹಿಸಲಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp