ಹೊಳಲ್ಕೆರೆ: ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಭಾರತೀಯ ಜನತಾ ಪಾರ್ಟಿ ಅತ್ಯುತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ, ಹೊಳಲ್ಕೆರೆಯ ಬಿಜೆಪಿ ಮಂಡಲದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.

ಸ್ಥಳೀಯ ಶಾಸಕ ಡಾ. ಎಂ. ಚಂದ್ರಪ್ಪ ಅವರ ನೇತೃತ್ವದಲ್ಲಿ ನಡೆದ ಈ ಸಂಭ್ರಮಾಚರಣೆಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಸಂದ ಜಯ ಇದೆಂದು ಘೋಷಣೆಗಳನ್ನು ಕೂಗಲಾಯಿತು.
ಈ ಸಂದರ್ಭದಲ್ಲಿ ಹೊಳಲ್ಕೆರೆ ಬಿಜೆಪಿ ಮಂಡಲದ ಅಧ್ಯಕ್ಷರಾದ ಶ್ರೀ ಕುಮಾರಣ್ಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಮಹೇಶಣ್ಣ, ಪ್ರಮುಖ ಮುಖಂಡರಾದ ಶ್ರೀ ಬಸವರಾಜ್ ಯಾದವ್, ಶ್ರೀ ಡಿ.ಸಿ.ಮೋಹನ್, ಶ್ರೀ ಪ್ರವೀಣ್ ಸೇರಿದಂತೆ ಹೊಳಲ್ಕೆರೆ ಮಂಡಲದ ಚುನಾಯಿತ ಪ್ರತಿನಿಧಿಗಳು ಹಾಗೂ ಪಕ್ಷದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
