ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ. ಅವರ ಗೌರವಾರ್ಥವಾಗಿ ಇಂದು ನಮ್ಮ ವೆಬ್‌ಸೈಟ್ ಕಪ್ಪು-ಬಿಳುಪಿನಲ್ಲಿ ಪ್ರಕಟವಾಗುತ್ತಿದೆ.
D Sudhakar
ಭಾವಪೂರ್ಣ ಶ್ರದ್ಧಾಂಜಲಿ
ಸಚಿವ ಡಿ. ಸುಧಾಕರ್
ರಾಜಕೀಯ ಹೆಜ್ಜೆಗುರುತು ಡಿ. ಸುಧಾಕರ್ ಅವರು ತಮ್ಮ ಜನಪರ ಕಾರ್ಯಗಳಿಂದ ‘ಸೋಲಿಲ್ಲದ ಸರದಾರ’ ಎಂದೇ ಖ್ಯಾತರಾಗಿದ್ದ ಅನುಭವಿ ರಾಜಕಾರಣಿ.
2004
ಮೊದಲ ಬಾರಿಗೆ ಆಯ್ಕೆ ಮೊದಲ ಬಾರಿಗೆ ಚಳ್ಳಕೆರೆ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆ.
2008
ಪಕ್ಷೇತರ ಗೆಲುವು & ಸಚಿವ ಸ್ಥಾನ ಹಿರಿಯೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು. ಬಳಿಕ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿ ಸಮಾಜ ಕಲ್ಯಾಣ ಸಚಿವರಾಗಿ (2008-2009) ಹಾಗೂ ಯುವಜನ ವ್ಯವಹಾರ ಸಚಿವರಾಗಿ ಸೇವೆ.
2013
ಕಾಂಗ್ರೆಸ್ ಮರಳುವಿಕೆ ಕಾಂಗ್ರೆಸ್ ಪಕ್ಷಕ್ಕೆ ಮರಳಿ, ಹಿರಿಯೂರು ಕ್ಷೇತ್ರದಿಂದ ಜೆಡಿಎಸ್‌ನ ಎ. ಕೃಷ್ಣಪ್ಪ ವಿರುದ್ಧ ಗೆಲುವು ಸಾಧಿಸಿದ್ದರು.
2018
ಚುನಾವಣಾ ಹಿನ್ನಡೆ ಹಿರಿಯೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ವಿರುದ್ಧ ಸೋಲು.
2023
ಮತ್ತೆ ಜಯಭೇರಿ ಮತ್ತೆ ಹಿರಿಯೂರು ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಜಯಭೇರಿ. ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ. ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಣೆ.
ಚಿತ್ರದುರ್ಗಕ್ಕೆ ತುಂಬಲಾರದ ನಷ್ಟ ಸಚಿವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದು, ಇಡೀ ಚಿತ್ರದುರ್ಗ ಜಿಲ್ಲೆ ಓರ್ವ ಜನಪ್ರಿಯ ನಾಯಕನನ್ನು ಕಳೆದುಕೊಂಡಂತಾಗಿದೆ.

ಡಿ.ಸುಧಾಕರ್ ವ್ಯಕ್ತಿ ಪರಿಚಯ ಹಾಗೂ ರಾಜಕೀಯ ಪಯಣ

D Sudhakar
ಜನನ ಡಿ ಸುಧಾಕರ್ ಅವರು 28.03.1961 ರಲ್ಲಿ ಜನಿಸಿದರು.
D Sudhakar
ರಾಜಕೀಯ ಪ್ರವೇಶ (2004) ಪ್ರಥಮ ಬಾರಿಗೆ ಚಳ್ಳಕೆರೆಯಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದರು.
D Sudhakar
ಪಕ್ಷೇತರ ಜಯ (2008) ಹಿರಿಯೂರು ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದರು.
D Sudhakar
ಸಚಿವ ಸ್ಥಾನ ಯಡಿಯೂರಪ್ಪ ಸರ್ಕಾರಕ್ಕೆ ಬೆಂಬಲ ನೀಡಿ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದರು.
D Sudhakar
ಮರು ಆಯ್ಕೆ (2023) ಕಾಂಗ್ರೆಸ್ ನಿಂದ ಆಯ್ಕೆಯಾಗಿ ಸಾಂಖಿಕ ಮತ್ತು ಯೋಜನಾ ಸಚಿವರಾಗಿದ್ದರು.
ಸಹಕಾರ ಕ್ಷೇತ್ರದ ಧೀಮಂತ ಕಳೆದ 20 ವರ್ಷಗಳಿಂದ ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದರು.
ಬಡವರ ಬಂಧು ಅಧಿಕಾರ ಇದ್ದಾಗ, ಇಲ್ಲದಿದ್ದಾಗ ಅಪಾರ ಜನರಿಗೆ ಸಹಾಯಾಸ್ತ ಚಾಚಿದ್ದ ಅವರು 'ಬಡವರ ಬಂಧು' ಎಂದೇ ಪ್ರಸಿದ್ಧರು.

ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ

Author Picture
Published On: May 10, 2026

—Election Update—

ಬೆಂಗಳೂರು: ಕರ್ನಾಟಕದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ ಅವರು ತೀವ್ರ ಅನಾರೋಗ್ಯದಿಂದ ಇಂದು ಮುಂಜಾನೆ 3:15ರ ಸುಮಾರಿಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದ ಹಿನ್ನೆಲೆ: ಕಳೆದ ಮಾರ್ಚ್ 27ರಂದು ಮೊಣಕಾಲು ನೋವಿನ ಚಿಕಿತ್ಸೆಗಾಗಿ (ಶಸ್ತ್ರಚಿಕಿತ್ಸೆ) ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಆಪರೇಷನ್ ಬಳಿಕ ಅವರಿಗೆ ಶ್ವಾಸಕೋಶದ ಸೋಂಕು ತೀವ್ರವಾಗಿ ಉಲ್ಬಣಿಸಿತ್ತು. ಸೋಂಕು ಕಡಿಮೆಯಾಗದ ಹಿನ್ನೆಲೆಯಲ್ಲಿ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೆಲವು ದಿನಗಳ ಹಿಂದೆ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ತೀವ್ರ ನಿಗಾವಹಿಸಿ ಚಿಕಿತ್ಸೆ ನೀಡಿದರೂ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ವೈಯಕ್ತಿಕ ಜೀವನ: ಮಾರ್ಚ್ 28, 1961ರಂದು ಚಿತ್ರದುರ್ಗದ ಚಳ್ಳಕೆರೆಯಲ್ಲಿ ಜನಿಸಿದ್ದ ಸುಧಾಕರ್ ಅವರು, ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ಮೃತರು ಪತ್ನಿ ಹರ್ಷಿಣಿ ಸುಧಾಕರ್, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ರಾಜಕೀಯ ಹೆಜ್ಜೆಗುರುತು: ಡಿ. ಸುಧಾಕರ್ ಅವರು ತಮ್ಮ ಜನಪರ ಕಾರ್ಯಗಳಿಂದ ‘ಸೋಲಿಲ್ಲದ ಸರದಾರ’ ಎಂದೇ ಖ್ಯಾತರಾಗಿದ್ದ ಅನುಭವಿ ರಾಜಕಾರಣಿ.

  • 2004: ಮೊದಲ ಬಾರಿಗೆ ಚಳ್ಳಕೆರೆ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆ.

  • 2008: ಹಿರಿಯೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು. ಬಳಿಕ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿ ಸಮಾಜ ಕಲ್ಯಾಣ ಸಚಿವರಾಗಿ (2008-2009) ಹಾಗೂ ಯುವಜನ ವ್ಯವಹಾರ ಸಚಿವರಾಗಿ ಸೇವೆ ಸಲ್ಲಿಸಿದ್ದರು.

  • 2013: ಕಾಂಗ್ರೆಸ್ ಪಕ್ಷಕ್ಕೆ ಮರಳಿ, ಹಿರಿಯೂರು ಕ್ಷೇತ್ರದಿಂದ ಜೆಡಿಎಸ್‌ನ ಎ. ಕೃಷ್ಣಪ್ಪ ವಿರುದ್ಧ ಗೆಲುವು ಸಾಧಿಸಿದ್ದರು.

  • 2018: ಹಿರಿಯೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ವಿರುದ್ಧ ಸೋಲು.

    • 2023: ಮತ್ತೆ ಹಿರಿಯೂರು ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಜಯಭೇರಿ ಬಾರಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿ, ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರು ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

    ಸಚಿವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದು, ಇಡೀ ಚಿತ್ರದುರ್ಗ ಜಿಲ್ಲೆ ಓರ್ವ ಜನಪ್ರಿಯ ನಾಯಕನನ್ನು ಕಳೆದುಕೊಂಡಂತಾಗಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

"ಮಧ್ಯ ಕರ್ನಾಟಕ ಲೈವ್ (Madhyakarnataka.live) ಕರ್ನಾಟಕದ ಹೃದಯಭಾಗದ ನೈಜ, ನಿಖರ ಮತ್ತು ಕ್ಷಣ ಕ್ಷಣದ ಸುದ್ದಿಗಳಿಗಾಗಿ ಮೀಸಲಾದ ಡಿಜಿಟಲ್ ಸುದ್ದಿ ವೇದಿಕೆಯಾಗಿದೆ. ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳ ಸ್ಥಳೀಯ ಸಮಸ್ಯೆಗಳು, ರಾಜಕೀಯ, ಕೃಷಿ, ಶಿಕ್ಷಣ ಮತ್ತು ಸಾಂಸ್ಕೃತಿಕ ವಿದ್ಯಮಾನಗಳನ್ನು ಜಗತ್ತಿಗೆ ತಲುಪಿಸುವುದು ನಮ್ಮ ಗುರಿ. ನಾವು ಕೇವಲ ಸುದ್ದಿಯನ್ನಷ್ಟೇ ಅಲ್ಲ, ಜನರ ಧ್ವನಿಯಾಗಲು ಬಯಸುತ್ತೇವೆ."… Read More

Related News

Home
Web Stories
Instagram
WhatsApp