ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಪ್ರತಿಭಾವಂತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು 2026-27ನೇ ಸಾಲಿಗೆ ಜಿಲ್ಲೆಯ 22 ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಆಯ್ಕೆ ಮಾಡುವ ಅರ್ಹತಾ ಪರೀಕ್ಷೆಯು ಮಂಗಳವಾರ ಯಶಸ್ವಿಯಾಗಿ ಜರುಗಿತು.
ಯೋಜನೆಯಡಿ 5ನೇ ತರಗತಿ ಪೂರೈಸಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಏಪ್ರಿಲ್ 15 ರಿಂದ ಮೇ 04ರವರೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಒಟ್ಟು 336 ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಮೇ.12 ಮಂಗಳವಾರ ಬೆಳಿಗ್ಗೆ 11:00 ಗಂಟೆಗೆ ನಗರದ ನಗರಸಭೆ ಕಚೇರಿ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಪರೀಕ್ಷೆ ನಡೆಯಿತು. ನೋಂದಾಯಿಸಿಕೊಂಡಿದ್ದ ಒಟ್ಟು ವಿದ್ಯಾರ್ಥಿಗಳಲ್ಲಿ 321 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 5 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ (ಡಯಟ್) ಪ್ರಾಂಶುಪಾಲರು ಹಾಗೂ ಉಪ ಪ್ರಾಂಶುಪಾಲರ ಮಾರ್ಗದರ್ಶನದಲ್ಲಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ.ಬಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಾ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಈ ಪರೀಕ್ಷೆಯ ಮೂಲಕ ಆಯ್ಕೆಯಾಗುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುವ ಅವಕಾಶ ಲಭ್ಯವಾಗಲಿದೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
