ದಾವಣಗೆರೆ/ಹರಿಹರ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದ ಮೇಲೆ ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಂದು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ವಿಚಾರಣೆ ಎದುರಿಸಿದ್ದಾರೆ.
ಘಟನೆಯ ಸಂಪೂರ್ಣ ವಿವರ:
-
ಎಫ್‌ಐಆರ್ ದಾಖಲು: 16 ವರ್ಷದ ಸಂತ್ರಸ್ತ ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಮೇ 7 ರಂದು ಗದಗದ ಲಕ್ಷ್ಮೇಶ್ವರ ಠಾಣೆಯಲ್ಲಿ ವಚನಾನಂದ ಶ್ರೀಗಳ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ತದನಂತರ ಈ ಪ್ರಕರಣವನ್ನು ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
-
ಏನಿದು ಆರೋಪ?: ಬಡತನದ ಕಾರಣಕ್ಕೆ 6, 7 ಮತ್ತು 8ನೇ ತರಗತಿ ಓದುತ್ತಿದ್ದ ಬಾಲಕನನ್ನು ಊಟ, ವಸತಿ ಮತ್ತು ವ್ಯಾಸಂಗಕ್ಕಾಗಿ ಮಠದಲ್ಲಿ ಬಿಡಲಾಗಿತ್ತು. ಆದರೆ, 2021 ರಿಂದ 2024 ರ ಅವಧಿಯಲ್ಲಿ ಮಠದಲ್ಲಿ ಶಾಲೆಗೆ ಹೋಗುವ ಮುನ್ನ ಸ್ನಾನಗೃಹದಲ್ಲಿ ಬಾಲಕರೊಂದಿಗೆ ಸ್ವಾಮೀಜಿ ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂಬ ಭೀಕರ ಆರೋಪ ದೂರಿನಲ್ಲಿದೆ.
-
ಜೀವ ಬೆದರಿಕೆ: ಮಕ್ಕಳು ಪ್ರತಿರೋಧ ವ್ಯಕ್ತಪಡಿಸಿದರೆ ಅವರಿಗೆ ಹೊಡೆದು, ಬಡಿದು ಹಲ್ಲೆ ಮಾಡಿದ್ದಲ್ಲದೆ, “ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಜೀವ ತೆಗೆಯುತ್ತೇನೆ” ಎಂದು ಬೆದರಿಕೆ ಹಾಕಿ, ಊಟ ನೀಡದೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.
-
ಪೊಲೀಸ್ ವಿಚಾರಣೆ: ನಿನ್ನೆ ರಾತ್ರಿಯೇ ಪೊಲೀಸರು ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ 9 ಗಂಟೆಗೆ ಸ್ವಾಮೀಜಿ ಹರಿಹರ ಗ್ರಾಮಾಂತರ ಠಾಣೆಗೆ ಖುದ್ದಾಗಿ ಹಾಜರಾಗಿದ್ದಾರೆ. ಪಿಎಸ್‌ಐ ಮಂಜುಳಾ ಮತ್ತು ಸರ್ಕಲ್ ಇನ್ಸ್‌ಪೆಕ್ಟರ್ ಸುರೇಶ್ ಸಗರಿ ನೇತೃತ್ವದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ನಿರಂತರ ವಿಚಾರಣೆ ನಡೆದಿದ್ದು, ಪೊಲೀಸರು ಸ್ವಾಮೀಜಿಯವರಿಂದ ಲಿಖಿತ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
-
ವೈದ್ಯಕೀಯ ಪರೀಕ್ಷೆ: ಪೊಲೀಸ್ ಠಾಣೆಯ ವಿಚಾರಣೆಯ ಬಳಿಕ ವಚನಾನಂದ ಸ್ವಾಮೀಜಿಯನ್ನು ಹರಿಹರ ತಾಲೂಕು ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯಲಾಗುತ್ತಿದೆ.
ಬಂಧನ ಭೀತಿಯಿಂದ ಪಾರು: ಮಠದ ಟ್ರಸ್ಟಿಗಳು ತಮ್ಮ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಆರೋಪಿಸಿರುವ ವಚನಾನಂದ ಶ್ರೀಗಳು, ಈ ಮೊದಲೇ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು (Anticipatory Bail) ಪಡೆದುಕೊಂಡಿದ್ದಾರೆ. ಹೀಗಾಗಿ ಸದ್ಯಕ್ಕೆ ಬಂಧನದ ಭೀತಿಯಿಂದ ಪಾರಾಗಿದ್ದು, ತನಿಖೆಗೆ ಸಹಕರಿಸುತ್ತಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ನೋಡ್ತಾ ಇರಿ: Madhyakarnataka.live
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
