,

ಹರಿಹರ ನಗರದ ಜನರೇ ಗಮನಿಸಿ: ಮೇ 17ರಿಂದ 4 ದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ!

ಹರಿಹರ ನಗರದಲ್ಲಿ ಕುಡಿಯುವ ನೀರಿನ ಪೂರೈಕೆ ವ್ಯತ್ಯಯ - ತುಂಗಭದ್ರಾ ನದಿ ಜಾಕ್‌ವೆಲ್ ಕಾಮಗಾರಿ

—Election Update—

ಹರಿಹರ: ನಗರದ ಸಾರ್ವಜನಿಕರೇ ಗಮನಿಸಿ, ಮೇ 17ರಿಂದ ಮುಂದಿನ ನಾಲ್ಕು ದಿನಗಳ ಕಾಲ ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ತಾತ್ಕಾಲಿಕವಾಗಿ ವ್ಯತ್ಯಯ ಉಂಟಾಗಲಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಯುಐಡಿಎಫ್‌ಸಿ-ಕೆಐಯುಡಬ್ಲ್ಯುಎಂಐಪಿ (KUIDFC-KIUWMIP) ಯೋಜನೆಯಡಿ ಪ್ರಸ್ತುತ ಹರಿಹರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ, ಕವಲೆತ್ತು ಗ್ರಾಮದ ಬಳಿ ಇರುವ ತುಂಗಭದ್ರಾ ನದಿಯ ಜಾಕ್‌ವೆಲ್‌ನಲ್ಲಿ ಅಪಾರ ಪ್ರಮಾಣದ ಮರಳು ಮತ್ತು ಕಸದ ಕಡ್ಡಿಗಳು ಸಂಗ್ರಹಗೊಂಡಿವೆ. ನೀರು ಸರಬರಾಜು ವ್ಯವಸ್ಥೆಯನ್ನು ಸುಗಮಗೊಳಿಸಲು ಈ ಕಸ ಹಾಗೂ ಮರಳನ್ನು ತೆರವುಗೊಳಿಸುವ ತುರ್ತು ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.

ಯಾವ ಸಮಯದಲ್ಲಿ ನೀರಿರುವುದಿಲ್ಲ?

ಮೇ 17ರಿಂದ ಮೇ 20ರವರೆಗೆ ಪ್ರತಿದಿನ ಬೆಳಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಸಾರ್ವಜನಿಕರಿಗೆ ನೀರು ಪೂರೈಕೆ ಇರುವುದಿಲ್ಲ. ಆದರೆ, ನಾಗರಿಕರಿಗೆ ತೊಂದರೆಯಾಗದಂತೆ ರಾತ್ರಿ 10:00 ಗಂಟೆಯಿಂದ ಮರುದಿನ ಬೆಳಗ್ಗೆ 9:00 ಗಂಟೆಯವರೆಗೆ ಎಂದಿನಂತೆ ನೀರು ಸರಬರಾಜು ಮಾಡಲಾಗುತ್ತದೆ ಎಂದು ನಗರಸಭೆ ಸ್ಪಷ್ಟಪಡಿಸಿದೆ.

ಪ್ರಸ್ತುತ ಕಡು ಬೇಸಿಗೆ ಇರುವುದರಿಂದ ಸಾರ್ವಜನಿಕರು ನೀರನ್ನು ಪೋಲು ಮಾಡದೆ ಅತ್ಯಂತ ಮಿತವಾಗಿ ಬಳಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ತಮ್ಮ ದೈನಂದಿನ ಅಗತ್ಯಕ್ಕೆ ತಕ್ಕಷ್ಟು ನೀರನ್ನು ಮೊದಲೇ ಸಂಗ್ರಹಿಸಿಟ್ಟುಕೊಂಡು ನಗರಸಭೆಯೊಂದಿಗೆ ಸಹಕರಿಸಬೇಕಾಗಿ ಕೋರಲಾಗಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp