ದಾವಣಗೆರೆ: ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮಹಾರಾಷ್ಟ್ರದ ಪುಣೆಯಲ್ಲಿರುವ ‘ಆರ್ಮಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ’ (AIT) 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ (PG) ಮತ್ತು ಪಿಎಚ್.ಡಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆರ್ಮಿ ವೆಲ್ಫೇರ್ ಎಜುಕೇಷನ್ ಸೊಸೈಟಿ (AWES) ಅಡಿಯಲ್ಲಿ ಕಾರ್ಯನಿರ್ವಹಿಸುವ ಈ ಸಂಸ್ಥೆಯಲ್ಲಿ ಕೇವಲ ಅರ್ಹ ಮಾಜಿ ಸೈನಿಕರ ಅವಲಂಬಿತರಿಗೆ (ಮಕ್ಕಳಿಗೆ) ಮಾತ್ರ ಪ್ರವೇಶ ಪಡೆಯಲು ಅವಕಾಶವಿರುತ್ತದೆ.
ಯಾವೆಲ್ಲಾ ಕೋರ್ಸ್‌ಗಳಿವೆ?
- ಎಂ.ಇ (M.E): ಡಾಟಾ ಸೈನ್ಸ್ (ಕಂಪ್ಯೂಟರ್ ಇಂಜಿನಿಯರಿಂಗ್)
- ಎಂ.ಇ (M.E): ವಿ.ಎಲ್.ಎಸ್.ಐ ಮತ್ತು ಎಂಬೆಡ್ಡೆಡ್ ಸಿಸ್ಟಮ್ಸ್ (ಎಲೆಕ್ಟ್ರಾನಿಕ್ಸ್ ಮತ್ತು ಟೆಲಿ ಕಮ್ಯುನಿಕೇಷನ್)
- ಪಿಎಚ್.ಡಿ (Ph.D): ಕಂಪ್ಯೂಟರ್ ಇಂಜಿನಿಯರಿಂಗ್ ವಿಭಾಗದಲ್ಲಿ ಸಂಶೋಧನೆ.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ www.aitpune.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.
ನೆನಪಿರಲಿ ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು 2026ರ ಜುಲೈ 11 ಕೊನೆಯ ದಿನವಾಗಿದೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಹೆಚ್ಚಿನ ಮಾಹಿತಿಗಾಗಿ:
ಕೋರ್ಸ್‌ಗಳ ವಿವರ, ಅರ್ಹತೆ ಹಾಗೂ ಪ್ರವೇಶ ಪ್ರಕ್ರಿಯೆಯ ಕುರಿತು ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಅಭ್ಯರ್ಥಿಗಳು ಶಿವಮೊಗ್ಗದಲ್ಲಿರುವ ‘ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ’ಯ ಉಪ ನಿರ್ದೇಶಕರ ಕಾರ್ಯಾಲಯವನ್ನು ನೇರವಾಗಿ ಸಂಪರ್ಕಿಸಬಹುದಾಗಿದೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
