ದಾವಣಗೆರೆ: ಜಿಲ್ಲೆಯ ಶೈಕ್ಷಣಿಕ ವಲಯದಲ್ಲಿ ಹರಿಹರ ತಾಲೂಕಿನ ಜಿಗಲಿ ಗ್ರಾಮದ ‘ಗುರುಧ್ಯಾನ ವಿದ್ಯಾಸಂಸ್ಥೆ’ ಮತ್ತೊಮ್ಮೆ ಐತಿಹಾಸಿಕ ಸಾಧನೆ ಮಾಡಿದೆ. 2026–27ನೇ ಸಾಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಈ ಸಂಸ್ಥೆಯ ಬರೋಬ್ಬರಿ 48 ವಿದ್ಯಾರ್ಥಿಗಳು ಆಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದಾರೆ.
ಜಿಲ್ಲಾ ಟಾಪರ್ಸ್ ಆಗಿ ಮಿಂಚಿದ ಜಯಂತ್, ಇಂಚರ!
ಸಂಸ್ಥೆಯ ವಿದ್ಯಾರ್ಥಿಗಳಾದ ಎಂ. ಜೆ. ಜಯಂತ್ ಹಾಗೂ ಇಂಚರ ಗಂಗಾಧರ ನಿಟ್ಟೂರ್ ಅವರು ಶೇಕಡಾ 100 ಕ್ಕೆ 93 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ರಾಂಕ್ (District Toppers) ಹಂಚಿಕೊಂಡಿದ್ದಾರೆ. ಇವರೊಂದಿಗೆ ಮತ್ತೊಬ್ಬ ಪ್ರತಿಭಾವಂತ ವಿದ್ಯಾರ್ಥಿನಿ ಯಶಸ್ವಿನಿ ಪಿ. ಅವರು ಜಿಲ್ಲೆಗೆ 4ನೇ ರಾಂಕ್ ಗಳಿಸಿ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ.
ಆಡಳಿತ ಮಂಡಳಿಯಿಂದ ಹಾರ್ದಿಕ ಅಭಿನಂದನೆ
ವಿದ್ಯಾರ್ಥಿಗಳ ಈ ಅಭೂತಪೂರ್ವ ಯಶಸ್ಸಿಗೆ ಸಂಸ್ಥೆಯ ಅಧ್ಯಕ್ಷರಾದ ಎಂ.ಕೆ. ಸ್ವಾಮಿ, ಕಾರ್ಯದರ್ಶಿ ಸಾನ್ನಿ ಎಂ.ಕೆ. ಸ್ವಾಮಿ, ನಿರ್ದೇಶಕರಾದ ನಾಗರಾಜ್ ಹಾಗೂ ಆಡಳಿತ ಮಂಡಳಿಯ ಎಲ್ಲಾ ಪದಾಧಿಕಾರಿಗಳು ಮತ್ತು ಶಿಕ್ಷಕ ವೃಂದದವರು ಜಿಗಲಿ ಗ್ರಾಮದ ಪರವಾಗಿ ವಿಜೇತ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಹಾರ್ದಿಕವಾಗಿ ಅಭಿನಂದಿಸಿದ್ದಾರೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
