ಚಿತ್ರದುರ್ಗ: ಇಲ್ಲಿನ ಪ್ರಸಿದ್ಧ ಏಳು ಸುತ್ತಿನ ಕೋಟೆಯ ಸಮೀಪವಿರುವ ಹೊಂಡದಲ್ಲಿ ಕಳೆದ ಒಂದು ವರ್ಷದಿಂದ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಈ ಹೊಂಡವು ಮುಂಚಿನಿಂದಲೂ ಸ್ಥಳೀಯ ಯುವಕರಿಗೆ ಈಜಾಡಲು ನೆಚ್ಚಿನ ತಾಣವಾಗಿದೆ. ಆದರೆ ಈಗ ಮೊಸಳೆ ಇರುವುದು ಗೊತ್ತಿದ್ದರೂ ಸಹ, ಯುವಕರು ಅಪಾಯವನ್ನು ಲೆಕ್ಕಿಸದೆ ಹೊಂಡಕ್ಕಿಳಿದು ಈಜಾಡುತ್ತಿದ್ದಾರೆ.
ಹೊಂಡದ ಸುತ್ತಲೂ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ವತಿಯಿಂದ ‘ಮೊಸಳೆ ಇದೆ, ಎಚ್ಚರಿಕೆ’ ಎಂಬ ಫಲಕಗಳನ್ನು ಹಾಕಲಾಗಿದೆಯಾದರೂ, ಯುವಕರು ಮಾತ್ರ ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇದರಿಂದಾಗಿ ಯಾವುದೇ ಕ್ಷಣದಲ್ಲಾದರೂ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆಯಿದೆ ಎಂದು ಪೋಷಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಯು ಕೇವಲ ಎಚ್ಚರಿಕೆ ಫಲಕ ಹಾಕಿ ಕೈತೊಳೆದುಕೊಂಡಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವಕರ ಪ್ರಾಣಕ್ಕೆ ಸಂಚಕಾರ ಬರುವ ಮುನ್ನವೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು, ಹೊಂಡದಲ್ಲಿರುವ ಮೊಸಳೆಯನ್ನು ತಕ್ಷಣವೇ ಸೆರೆಹಿಡಿದು ಬೇರೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಸಾರ್ವಜನಿಕರು ಹಾಗೂ ಪೋಷಕರು ಒತ್ತಾಯಿಸಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
