ಚಿತ್ರದುರ್ಗ: ಜಿಲ್ಲೆಯ ತಮಟಕಲ್ಲು ಗ್ರಾಮದ ಬಳಿ ಭಾನುವಾರ ಮುಂಜಾನೆ ಕರುಳು ಹಿಂಡುವ ಘಟನೆಯೊಂದು ಸಂಭವಿಸಿದೆ. ಲಾರಿ, ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದಾರೆ.
ಘಟನೆಯ ವಿವರ:
ಆಲಘಟ್ಟ ಗ್ರಾಮದ ನಿವಾಸಿಗಳಾದ ಗೋವಿಂದಪ್ಪ ಮತ್ತು ಬಸವರಾಜಪ್ಪ ಮೃತಪಟ್ಟ ದುರ್ದೈವಿಗಳು. ಇವರಿಬ್ಬರು ತಮಟಕಲ್ಲು ಗ್ರಾಮದಿಂದ ತಮ್ಮ ಸ್ವಗ್ರಾಮವಾದ ಆಲಘಟ್ಟಕ್ಕೆ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇವರ ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
