ಉನ್ನತ ಬೌದ್ದಿಕ ಆಸ್ತಿ ಹಕ್ಕುಗಳು: ಐದು ದಿನಗಳ ವಿಶೇಷ ತರಬೇತಿ ಕಾರ್ಯಾಗಾರ

ksta-advanced-ipr-workshop-bengaluru-2026

—Election Update—

ಚಿತ್ರದುರ್ಗ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಸಾರ್ವಜನಿಕರು ಹಾಗೂ ಆಸಕ್ತರಿಗಾಗಿ ಉನ್ನತ ಬೌದ್ಧಿಕ ಆಸ್ತಿ ಹಕ್ಕುಗಳು (Advanced Intellectual Property Rights – IPR) ಎಂಬ ವಿಷಯದ ಕುರಿತು ಐದು ದಿನಗಳ ವಿಶೇಷ ತರಬೇತಿ ಕಾರ್ಯಾಗಾರ ಆಯೋಜಿಸಿದ್ದು, ಈ ಕಾರ್ಯಾಗಾರವು 2026ರ ಜೂನ್ 16 ರಿಂದ ಜೂನ್ 20 ರವರೆಗೆ ಅಕಾಡೆಮಿಯ ಕಚೇರಿಯಲ್ಲಿ ನಡೆಯಲಿದೆ.

ಈ ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞಾನಿಗಳು ಉಪನ್ಯಾಸ ನೀಡಲಿದ್ದಾರೆ. ವಿಜ್ಞಾನ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರಾಧ್ಯಾಪಕರು, ವಿಜ್ಞಾನ ಆಸಕ್ತರು ಹಾಗೂ ಕೈಗಾರಿಕೋದ್ಯಮದ ಪ್ರತಿನಿಧಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು. ಆಸಕ್ತರು 2026ರ ಜೂನ್ 12 ರೊಳಗಾಗಿ https://forms.gle/iwHJD5CxnccCfw4u5 ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ವಿದ್ಯಾರಣ್ಯಪುರ ಪೋಸ್ಟ್ ಮೇಜರ್ ಸಂದೀಪ್ ಉನ್ನೀಕೃಷ್ಣನ್ ರಸ್ತೆಯ ದೊಡ್ಡಬೆಟ್ಟಹಳ್ಳಿ ಬಡಾವಣೆ ಬಸ್ ನಿಲ್ದಾಣದ ಹತ್ತಿರದ ಪ್ರೊ.ಯು.ಆರ್.ರಾವ್ ವಿಜ್ಞಾನ ಭವನದಲ್ಲಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕಚೇರಿ ಅಥವಾ ಕಾರ್ಯಾಗಾರದ ಸಂಯೋಜಕರು ಹಾಗೂ ವೈಜ್ಞಾನಿಕಾಧಿಕಾರಿಯಾದ ಎ. ಜಿ. ಉಮೇಶ್ ಅವರ ದೂರವಾಣಿ ಸಂಖ್ಯೆ 9743084194 ಗೆ ಸಂಪರ್ಕಿಸಬಹುದು ಅಥವಾ ಅಕಾಡೆಮಿಯ ವೆಬ್‍ಸೈಟ್ https://kstacademy.in ಗೆ ಭೇಟಿ ನೀಡಬಹುದು ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆರ್.ಆನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp