ಮೊಳಕಾಲ್ಮೂರು: ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಸ್ಫೋಟಗೊಂಡು ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಳ್ಳಕೆರೆ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.
ಗುರುವಾರ ರಾತ್ರಿ ಸುಮಾರು 9:45ರ ವೇಳೆಯಲ್ಲಿ ಶ್ರೀನಿವಾಸ್ ಡಾಬಾ ಮುಂಭಾಗ ಈ ಅಪಘಾತ ಸಂಭವಿಸಿದೆ. ಮೃತರನ್ನು ಚಳ್ಳಕೆರೆ ನಿವಾಸಿಗಳಾದ ರಘು (40), ರುದ್ರೇಶ್ (36), ಪ್ರಮೋದ್ (35), ಸೋಮಶೇಖರ್ (35) ಮತ್ತು ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ. ಮೃತರಲ್ಲಿ ರಘು ಅವರು ಚಳ್ಳಕೆರೆ ಛಾಯಾಗ್ರಾಹಕರ ಸಂಘದ ಸಹ-ಕಾರ್ಯದರ್ಶಿಯಾಗಿದ್ದರು.

ಕಾರು ವೇಗವಾಗಿ ಚಲಿಸುತ್ತಿದ್ದಾಗ ಟೈರ್ ಒಡೆದಿದ್ದು, ತಕ್ಷಣವೇ ಚಾಲಕನ ನಿಯಂತ್ರಣ ತಪ್ಪಿ ಅದೇ ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಕಾರು ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಐವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಅಪಘಾತದ ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ವಿಶೇಷ ವರದಿ: madhyakarnataka.live )
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
