ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ: ಡಾ.ರಾಘವೇಂದ್ರ ಪ್ರಸಾದ್

dr-raghavendra-prasad-national-dengue-day-hosadurga

—Election Update—

ಚಿತ್ರದುರ್ಗ: ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು. ಡೆಂಗ್ಯೂ ನಿಯಂತ್ರಣಕ್ಕೆ ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲದೆ, ಸಾರ್ವಜನಿಕರು ಮತ್ತು ಎಲ್ಲಾ ವಿವಿಧ ಇಲಾಖೆಗಳು ಒಟ್ಟಾಗಿ ಕೈಜೋಡಿಸಬೇಕು ಎಂದು ಹೊಸದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಘವೇಂದ್ರ ಪ್ರಸಾದ್ ತಿಳಿಸಿದರು.

ಹೊಸದುರ್ಗ ತಾಲ್ಲೂಕಿನ ಬೆಲಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮುದಾಯದ ಸಹಭಾಗಿತ್ವ ಪರಿಶೀಲಿಸಿ, ಸ್ವಚ್ಛಗೊಳಿಸಿ ಹಾಗೂ ಮುಚ್ಚಿಡಿ ಎಂಬ ಘೋಷವಾಕ್ಯದ ಮಹತ್ವ ತಿಳಿಸಿದ ಅವರು, ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಅದನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ವಿವರವಾದ ಮಾಹಿತಿ ನೀಡಿದರು. ವಿವಿಧ ಇಲಾಖೆಗಳ ನಿರಂತರ ಸಹಯೋಗ ಹಾಗೂ ಸಾರ್ವಜನಿಕರ ಜಾಗೃತಿಯಿಂದಾಗಿ ಸದ್ಯ ಡೆಂಗ್ಯೂ ಪ್ರಕರಣಗಳ ಪ್ರಮಾಣ ಇಳಿಕೆಯ ಹಾದಿಯಲ್ಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ. ಸಹನಾ, ಡಾ. ಸುಮಾ, ಡಾ. ಕೃಪಾಕರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಲಲಿತಮ್ಮ, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಇದ್ದರು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp