ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ನಗರದ ಸಾರ್ವಜನಿಕರೇ ಗಮನಿಸಿ, ಮೇ 31 ಮತ್ತು ಜೂನ್ 01ರಂದು ನಗರದಾದ್ಯಂತ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗಲಿದೆ. ಶಾಂತಿಸಾಗರ ನೀರು ಸರಬರಾಜು ಯೋಜನೆಯ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯತ್ಯಯ ಉಂಟಾಗಲಿದೆ ಎಂದು ಚಿತ್ರದುರ್ಗ ನಗರಸಭೆ ತಿಳಿಸಿದೆ.
ಶಾಂತಿಸಾಗರ ಪೈಪ್‌ಲೈನ್ ದುರಸ್ತಿ ಕಾರ್ಯ
ಚಿತ್ರದುರ್ಗ ನಗರಕ್ಕೆ ಪ್ರಮುಖವಾಗಿ ನೀರು ಒದಗಿಸುವ ‘ಶಾಂತಿಸಾಗರ ನೀರು ಸರಬರಾಜು ಯೋಜನೆ’ಯ ಪೈಪ್‌ಲೈನ್‌ಗಳು ಹಾಗೂ ಯಂತ್ರೋಪಕರಣಗಳ ಅಗತ್ಯ ದುರಸ್ತಿ ಮತ್ತು ನಿರ್ವಹಣಾ ಕೆಲಸಗಳನ್ನು ಈ ಎರಡು ದಿನಗಳಲ್ಲಿ ನಡೆಸಲಾಗುತ್ತದೆ. ಕಾಮಗಾರಿ ನಡೆಯುವ ಅವಧಿಯಲ್ಲಿ ನೀರು ಪಂಪಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಿರುವುದರಿಂದ ನಗರದ ವಾರ್ಡ್‌ಗಳಿಗೆ ಪೂರೈಕೆಯಾಗುವ ನೀರಿನಲ್ಲಿ ವ್ಯತ್ಯಯವಾಗಲಿದೆ.
ನೀರು ಸರಬರಾಜು ನಿಲ್ಲುವ ಕಾರಣ ಸಾರ್ವಜನಿಕರು ಆಯಾ ವಾರ್ಡ್ ಹಾಗೂ ಬಡಾವಣೆಗಳಲ್ಲಿ ಲಭ್ಯವಿರುವ ಕೊಳವೆ ಬಾವಿಗಳ (ಬೋರ್‌ವೆಲ್) ನೀರನ್ನು ಬಳಸಿಕೊಳ್ಳಬೇಕು. ಹಾಗೆಯೇ ಕುಡಿಯುವ ನೀರಿಗಾಗಿ ಸ್ಥಳೀಯವಾಗಿ ಇರುವ ಶುದ್ಧ ಕುಡಿಯುವ ನೀರಿನ ಘಟಕಗಳ (RO Plants) ನೀರನ್ನು ಆಶ್ರಯಿಸುವಂತೆ ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
ಮಿತವಾಗಿ ಬಳಸಲು ಪೌರಾಯುಕ್ತರ ಮನವಿ
“ಬೇಸಿಗೆಯ ದಿನಗಳಾಗಿರುವುದರಿಂದ ಸಾರ್ವಜನಿಕರು ಲಭ್ಯವಿರುವ ನೀರನ್ನು ಅತ್ಯಂತ ಜಾಗರೂಕತೆಯಿಂದ ಮತ್ತು ಮಿತವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ನೀರನ್ನು ವ್ಯರ್ಥ ಮಾಡಬಾರದು. ಎರಡು ದಿನಗಳ ಕಾಲ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು” ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ಪತ್ರಿಕಾ ಪ್ರಕಟಣೆಯ ಮೂಲಕ ಕೋರಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
