ಎಸ್‌ ಎಸ್‌ ಮಲ್ಲಿಕಾರ್ಜುನ ಅವರಿಗೆ ಡಿಸಿಎಂ ಪಟ್ಟಕ್ಕಾಗಿ ದಾವಣಗೆರೆಯಲ್ಲಿ 101 ತೆಂಗಿನಕಾಯಿ ಒಡೆದು ವಿಶೇಷ ಪೂಜೆ!

ss-mallikarjun-supporters-dcm-demand-davanagere

—Election Update—

ದಾವಣಗೆರೆ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಸ್ಥಾನಮಾನಗಳ ಹಂಚಿಕೆ ಕುರಿತಾದ ಚಟುವಟಿಕೆಗಳು ಗರಿಗೆದರಿರುವ ಬೆನ್ನಲ್ಲೇ, ಮಧ್ಯ ಕರ್ನಾಟಕದ ಪ್ರಭಾವಿ ನಾಯಕ ಎಸ್‌ ಭಿನ್ನ ಶೈಲಿಯ ರಾಜಕೀಯ ಒತ್ತಡಗಳು ಆರಂಭವಾಗಿವೆ. ದಾವಣಗೆರೆ ಉತ್ತರ ಕ್ಷೇತ್ರದ ಶಾಸಕರೂ ಆಗಿರುವ ಎಸ್‌ .ಎಸ್. ಮಲ್ಲಿಕಾರ್ಜುನ ಅವರಿಗೆ ಮುಂಬರುವ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ (DCM) ಸ್ಥಾನ ನೀಡಬೇಕೆಂದು ಒತ್ತಾಯಿಸಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ದಾವಣಗೆರೆ ನಗರದ ಪ್ರಸಿದ್ಧ ಶ್ರೀ ದೇವತೆ ದುಗ್ಗಮ್ಮ (ದುರ್ಗಾಂಬಿಕಾ) ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಮಲ್ಲಿಕಾರ್ಜುನ ಅವರ ಪರವಾಗಿ ದೇವಿಗೆ ವಿಶೇಷ ಅರ್ಚನೆ ನೆರವೇರಿಸಿದ ಅಭಿಮಾನಿಗಳು, ತಾಯಿ ದುಗ್ಗಮ್ಮನ ಸನ್ನಿಧಿಯಲ್ಲಿ ಬರೋಬ್ಬರಿ 101 ತೆಂಗಿನಕಾಯಿಗಳನ್ನು ಒಡೆದು ಹರಕೆ ತೀರಿಸಿದರು. ಹೈಕಮಾಂಡ್ ಬಿಡುಗಡೆ ಮಾಡಲಿರುವ ಮೊದಲ ಪಟ್ಟಿಯಲ್ಲೇ ಎಸ್‌ ಎಸ್‌ ಮಲ್ಲಿಕಾರ್ಜುನ ಅವರಿಗೆ ಸಚಿವ ಸ್ಥಾನದ ಜೊತೆಗೆ ಪ್ರಮುಖವಾಗಿ ಉಪಮುಖ್ಯಮಂತ್ರಿ ಪಟ್ಟವನ್ನು ನೀಡಲೇಬೇಕು ಎಂದು ಈ ವೇಳೆ ಅಭಿಮಾನಿಗಳು ಬಲವಾಗಿ ಆಗ್ರಹಿಸಿದರು.

ಮಧ್ಯ ಕರ್ನಾಟಕಕ್ಕೆ ಸಿಗಬೇಕಿದೆ ಪ್ರಾತಿನಿಧ್ಯ:

“ಮಧ್ಯ ಕರ್ನಾಟಕ ಭಾಗಕ್ಕೆ ಈ ಬಾರಿ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಅತ್ಯಗತ್ಯವಾಗಿದೆ. ಈ ವಲಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಶಾಮನೂರು ಕುಟುಂಬದ ಕೊಡುಗೆ ಅಪಾರವಾಗಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿದ್ದಾರೆ. ಆದರೆ ಅವರಿಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ತಕ್ಕ ಸ್ಥಾನಮಾನ ಮತ್ತು ಗೌರವ ಸಿಗಲಿಲ್ಲ ಎಂಬ ಅಸಮಾಧಾನ ನಮ್ಮನ್ನು ಕಾಡುತ್ತಿದೆ. ಆ ಕೊರತೆಯನ್ನು ನೀಗಿಸಲು ಈಗ ಅವರ ಪುತ್ರ ಎಸ್‌ .ಎಸ್. ಮಲ್ಲಿಕಾರ್ಜುನ ಅವರಿಗೆ ಡಿಸಿಎಂ ಪಟ್ಟ ನೀಡಬೇಕು.”

ಈ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ದಾವಣಗೆರೆ ನಗರ ಹಾಗೂ ಗ್ರಾಮಾಂತರ ಭಾಗದ ನೂರಾರು ಅಭಿಮಾನಿಗಳು ಮತ್ತು ಸ್ಥಳೀಯ ಮುಖಂಡರು ಭಾಗವಹಿಸಿ, ತಮ್ಮ ನೆಚ್ಚಿನ ನಾಯಕನಿಗೆ ಉನ್ನತ ಸ್ಥಾನ ಸಿಗಲೆಂದು ಪ್ರಾರ್ಥಿಸಿದರು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp