ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ನಗರದ ಕೈಗಾರಿಕಾ ಪ್ರದೇಶ ಹಾಗೂ ಸುತ್ತಮುತ್ತಲಿನ ಹಲವು ಬಡಾವಣೆಗಳ ನಿವಾಸಿಗಳಿಗೆ ಪ್ರಮುಖ ಸೂಚನೆಯೊಂದನ್ನು ನೀಡಲಾಗಿದೆ. ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜೂನ್ 02ರಂದು ( ಇಂದು) ನಗರದ ಹಲವು ಪ್ರದೇಶಗಳಲ್ಲಿ ಇಡೀ ದಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಣೆಯಲ್ಲಿ ತಿಳಿಸಿದೆ.
ಯಾವ ಸಮಯದಲ್ಲಿ ವಿದ್ಯುತ್ ಇರುವುದಿಲ್ಲ?
ಬೆಸ್ಕಾಂ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಜೂನ್ 02ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ ಒಟ್ಟು 8 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ.

ಬಾಧಿತವಾಗುವ ಪ್ರದೇಶಗಳ ಪಟ್ಟಿ:
ಚಿತ್ರದುರ್ಗ ನಗರದ ಈ ಕೆಳಗಿನ ಪ್ರಮುಖ ಬಡಾವಣೆಗಳು ಮತ್ತು ಸುತ್ತಮುತ್ತಲಿನ ಸಾರ್ವಜನಿಕರು ವಿದ್ಯುತ್ ಇಲ್ಲದೆ ತೊಂದರೆ ಅನುಭವಿಸಬೇಕಾಗಬಹುದು:
- ಇಂಡಸ್ಟ್ರಿಯಲ್ ಏರಿಯಾ (ಕೈಗಾರಿಕಾ ಪ್ರದೇಶ)
- ಹಳೇ ಬೆಂಗಳೂರು ರಸ್ತೆ
- ಚಳ್ಳಕೆರೆ ಗೇಟ್
- ವೇಮನ ನಗರ
- ನಾರಾಯಣಪ್ಪ ಲೇಔಟ್
- ಆದಿಸಕ್ತಿ ನಗರ ಹಾಗೂ ಈ ಮಾರ್ಗಕ್ಕೆ ಒಳಪಡುವ ಸುತ್ತಮುತ್ತಲಿನ ಪ್ರದೇಶಗಳು.
“ಸಾರ್ವಜನಿಕರು ಮತ್ತು ಕೈಗಾರಿಕಾ ಉದ್ಯಮಿಗಳು ಈ ತುರ್ತು ಕಾಮಗಾರಿಗೆ ಸ್ಪಂದಿಸಬೇಕು. ವಿದ್ಯುತ್ ವ್ಯತ್ಯಯದ ಸಮಯದಲ್ಲಿ ಬೆಸ್ಕಾಂ ಜೊತೆ ಸಹಕರಿಸಬೇಕು,” ಎಂದು ಚಿತ್ರದುರ್ಗ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
🚀 JOIN WHATSAPP GROUP
(Instant Kannada News Updates on your Mobile)
ನಿವಾಸಿಗಳು ಮುಂಜಾಗ್ರತೆಯಾಗಿ ತಮ್ಮ ಗೃಹ ಬಳಕೆಯ ನೀರು ಹಾಗೂ ಇತರೆ ಅಗತ್ಯ ಕೆಲಸಗಳನ್ನು ಬೆಳಗ್ಗೆ 10 ಗಂಟೆಯ ಒಳಗೆ ವ್ಯವಸ್ಥೆ ಮಾಡಿಕೊಳ್ಳುವುದು ಒಳಿತು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
