ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ಮಾಡಿದ ಡಿಕೆಶಿ; ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಗಣ್ಯರು!

dk-shivakumar-new-cm-karnataka-oath-taking-ceremony-bengaluru

—Election Update—

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಹುದಿನಗಳಿಂದ ನಿರೀಕ್ಷಿಸಲಾಗುತ್ತಿದ್ದ ಮಹತ್ವದ ನಾಯಕತ್ವ ಬದಲಾವಣೆ ಕೊನೆಗೂ ಅಧಿಕೃತಗೊಂಡಿದೆ. ಕನಕಪುರದ ಬಂಡೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಐತಿಹಾಸಿಕ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ (ಲೋಕಭವನ) ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸಿಎಂಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ:

ಯಾವಾಗಲೂ ದೈವಭಕ್ತಿಗೆ ಹೆಸರಾಗಿರುವ ಡಿ.ಕೆ. ಶಿವಕುಮಾರ್ ಅವರು ತಮ್ಮ ಆರಾಧ್ಯ ದೈವ, ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ನಾನ್‌ರೆಡ್ಡಿಯ ‘ಶ್ರೀ ಗಂಗಾಧರ ಅಜ್ಜಯ್ಯ’ನವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಈ ಬಾರಿಯ ವಿಶೇಷವಾಗಿತ್ತು.

ಗಣ್ಯರ ದಂಡು ಭಾಗಿ:

ಈ ಐತಿಹಾಸಿಕ ಕ್ಷಣಕ್ಕೆ ಕಾಂಗ್ರೆಸ್ ಹೈಕಮಾಂಡ್‌ನ ಪ್ರಮುಖ ನಾಯಕರು ಸಾಕ್ಷಿಯಾದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ನಾಯಕತ್ವ ಹಸ್ತಾಂತರ ಮಾಡಿ ನಿರ್ಗಮಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಪ್ರಮುಖ ರಾಜಕೀಯ ನಾಯಕರು, ವಿವಿಧ ಮಠಾಧೀಶರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಚಿವ ಸಂಪುಟದ ಮೊದಲ ಹಂತದ ಭಾಗವಾಗಿ 13 ಪ್ರಮುಖ ಶಾಸಕರು ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp